ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಜನರಿಗೆ ಉಚಿತ ಲಸಿಕೆ ನೀಡಲು ಉದ್ಧವ್ ಠಾಕ್ರೆ ಸರ್ಕಾರ ನಿರ್ಧಾರ

Last Updated 25 ಏಪ್ರಿಲ್ 2021, 15:35 IST
ಅಕ್ಷರ ಗಾತ್ರ

ಮುಂಬೈ: ಮೇ 1ರಿಂದ ಆರಂಭವಾಗಲಿರುವ ಅಭಿಯಾನದಲ್ಲಿ 18ರಿಂದ 45 ವರ್ಷದವರಿಗೆ ಉಚಿತವಾಗಿ ಲಸಿಕೆ ನೀಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.

ಕಳೆದ ವಾರ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಲಸಿಕೆ ಅಭಿಯಾನ ಮತ್ತು ವಿತರಣೆ ಬಗ್ಗೆ ಚರ್ಚಿಸಲಾಗಿತ್ತು.

‘ಈಗಾಗಲೇ ಟೆಂಡರ್‌ಗಳನ್ನು ಕರೆಯಲಾಗಿದ್ದು, ಜನರಿಗೆ ವಿತರಿಸಲು ಲಸಿಕೆಗಳನ್ನು ಖರೀದಿಸಲಾಗುವುದು ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದರು. ಉಚಿತವಾಗಿ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲೇ ಪ್ರಕಟಣೆ ಹೊರಡಿಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಎನ್‌ಸಿಪಿ ಮುಖ್ಯ ವಕ್ತಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್‌ ಮಲಿಕ್‌, ‘ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಜನರಿಗೆ ಸಹಾಯ ಮಾಡುತ್ತದೆ’ ಎಂದು ಹೇಳಿದರು.

‘ಸರ್ಕಾರದ ಉನ್ನತ ಅಧಿಕಾರಿಗಳು ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್‌ನ ಘಟಕದೊಂದಿಗೆ ಸಂಪರ್ಕದಲ್ಲಿದ್ದಾರೆ. ಇವು ಕ್ರಮವಾಗಿ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್‌ ಲಸಿಕೆಯನ್ನು ಪೂರೈಕೆ ಮಾಡಿಲಿವೆ’ ಎಂದು ಮಲಿಕ್‌ ಹೇಳಿದ್ದಾರೆ.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿಯು ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ ₹400 ಮತ್ತು ಖಾಸಗಿ ಆಸ್ಪತ್ರೆಗಳಿಗೆ ₹600 ಹಾಗೂ ಭಾರತ್ ಬಯೋಟೆಕ್ ಕಂಪನಿ ಕೊವಾಕ್ಸಿನ್‌ ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ ₹600 ಮತ್ತು ಖಾಸಗಿ ಆಸ್ಪತ್ರೆಗಳಿಗೆ ₹1,200 ನಿಗದಿಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT