ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಶಿವಸೇನಾ ನಾಯಕನ ಸ್ಥಾನದಿಂದ ಶಿಂಧೆಯನ್ನು ಉಚ್ಛಾಟನೆ ಮಾಡಿದ ಠಾಕ್ರೆ

Last Updated 2 ಜುಲೈ 2022, 1:37 IST
ಅಕ್ಷರ ಗಾತ್ರ

ಮುಂಬೈ: ಶುಕ್ರವಾರದ ತಡರಾತ್ರಿ ಬೆಳವಣಿಗೆಯಲ್ಲಿ ಪಕ್ಷ ವಿರೋಧಿ ಆರೋಪದ ಮೇಲೆ ಶಿವಸೇನಾ ನಾಯಕ ಸ್ಥಾನದಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉದ್ಧವ್ ಠಾಕ್ರೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಶಿವಸೇನೆ ಅಧ್ಯಕ್ಷರ ನಂತರ ಶಿವಸೇನೆಯ ಸಂಘಟನೆಯ ನಾಯಕ ಅತ್ಯಂತ ಪ್ರಮುಖ.

‘ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ ಮತ್ತು ಸ್ವಯಂಪ್ರೇರಣೆಯಿಂದ ಶಿವಸೇನೆಯ ಸದಸ್ಯತ್ವವನ್ನು ತ್ಯಜಿಸಿದ್ದೀರಿ. ಆದ್ದರಿಂದ, ಶಿವಸೇನಾ ಪಕ್ಷದ ಪ್ರಮುಖನಾಗಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ನಾನು ನಿಮ್ಮನ್ನು ಶಿವಸೇನೆ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕುತ್ತಿದ್ದೇನೆ’ ಎಂದು ಠಾಕ್ರೆ ಅವರು ಶಿಂಧೆಗೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

39 ಶಾಸಕರ ಜೊತೆ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ ಶಿಂಧೆ, ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದರು. ಗುರುವಾರ ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನವಚನ ಸ್ವೀಕರಿಸಿದ್ದರು. ಇದಕ್ಕೂ ಮುನ್ನ, ರಾಜ್ಯಪಾಲರು ಬಹುಮತ ಸಾಬೀತಿಗೆ ಮಹಾ ವಿಕಾಸ ಅಘಾಡಿ ನೇತೃತ್ವದ ಸರ್ಕಾರಕ್ಕೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಮುಖ್ಯಮಥ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಮಧ್ಯೆ, ಮುಖ್ಯಮಂತ್ರಿ ಏಕನಾಥ ಶಿಂಧೆ ಜತೆಗಿರುವ ಶಿವಸೇನಾದ 39 ಶಾಸಕರು ಮತ್ತು ಬಿಜೆಪಿ ಮೈತ್ರಿ ಸರ್ಕಾರವು ಇದೇ 4ರಂದು (ಸೋಮವಾರ) ವಿಶ್ವಾಸಮತ ಕೋರಲಿದೆ. ಬಿಜೆಪಿ ಶಾಸಕ ರಾಹುಲ್‌ ನಾರ್ವೇಕರ್ ಅವರು ವಿಧಾನಸಭೆಯ ಸ್ಪೀಕರ್‌ ಹುದ್ದೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆ ನಡೆಸಬೇಕಾದ ಅಗತ್ಯ ಬಿದ್ದರೆ ಭಾನುವಾರ ಚುನಾವಣೆ ನಡೆಯಲಿದೆ. ಎರಡು ದಿನಗಳ ವಿಶೇಷ ಅಧಿವೇಶನ ಭಾನುವಾರವೇ ಆರಂಭವಾಗಲಿದೆ.

ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಉದ್ಧವ್‌ ನೇತೃತ್ವದ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟವಾದ ಮಹಾ ವಿಕಾಸ ಆಘಾಡಿ (ಎಂವಿಎ) ನಿರ್ಧರಿಸಿದೆ. ಆದರೆ, ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ.

ಬಿಜೆಪಿಯು 106 ಶಾಸಕರನ್ನು ಹೊಂದಿದ್ದರೆ, ಶಿವಸೇನಾದ 39 ಶಾಸಕರ ಬೆಂಬಲವೂ ಇದೆ. 10 ಪಕ್ಷೇತರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಕೆಲವು ಸಣ್ಣ ಪಕ್ಷಗಳ ಬೆಂಬಲವೂ ಇದೆ. ಹಾಗಾಗಿ, 165 ಶಾಸಕರು ಬೆಂಬಲಕ್ಕೆ ಇದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT