ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವು ವಿಜ್ಞಾನ ಕುರಿತ‌ ಪರೀಕ್ಷೆ: ವಿದ್ಯಾರ್ಥಿಗಳನ್ನು ಉತ್ತೇಜಿಸಲು ಯುಜಿಸಿ ಸೂಚನೆ

Last Updated 17 ಫೆಬ್ರುವರಿ 2021, 12:49 IST
ಅಕ್ಷರ ಗಾತ್ರ

ನವದೆಹಲಿ: ‘ಗೋವು ವಿಜ್ಞಾನ’ (ಹಸು ವಿಜ್ಞಾನ) ಕುರಿತು ರಾಷ್ಟ್ರಮಟ್ಟದ ಆನ್‌ಲೈನ್‌ ಪರೀಕ್ಷೆಯನ್ನು ಇದೇ 25 ರಂದು ಆಯೋಜಿಸಲಾಗಿದೆ. ಪರೀಕ್ಷೆಯಲ್ಲಿ ಸ್ವಯಂಪ್ರೇರಿತವಾಗಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಉತ್ತೇಜಿಸಬೇಕು ಎಂದು ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಪತ್ರ ಬರೆದಿದೆ.

ರಾಷ್ಟ್ರೀಯ ಕಾಮಧೇನು ಆಯೋಗವು (ಆರ್‌ಕೆಎ) ‘ಕಾಮಧೇನು ಗೋವು ವಿಜ್ಞಾನ ಪ್ರಚಾರ–ಪ್ರಸಾರ ಪರೀಕ್ಷೆ’ಯನ್ನು ಕನ್ನಡ ಸೇರಿದಂತೆ 11 ಪ್ರಾದೇಶಿಕ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ಆಯೋಜಿಸಿದೆ. ಪ್ರಾಥಮಿಕ, ಮಾಧ್ಯಮಿಕ, ಹಿರಿಯ ಮಾಧ್ಯಮಿಕ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಸಾಮಾನ್ಯ ಜನರು ಸಹ ಪರೀಕ್ಷೆ ಬರೆಯಬಹುದು. ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಶುಲ್ಕವಿಲ್ಲ.

‘ಹಸುಗಳ ಸಂರಕ್ಷಣೆ, ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಸರ್ಕಾರ ಆಯೋಗ ರಚಿಸಿದೆ. ಭಾರತೀಯರಲ್ಲಿ ಹಸುಗಳ ಬಗ್ಗೆ ಆಸಕ್ತಿ ಮೂಡಿಸುವುದು, ಅವುಗಳು ಹಾಲು ನೀಡುವುದನ್ನು ನಿಲ್ಲಿಸಿದ ನಂತರವೂ ವ್ಯಾಪಾರ ಅವಕಾಶಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಆಯೋಗದ ಉದ್ದೇಶವಾಗಿದೆ. ಆರ್ಥಿಕ, ವೈಜ್ಞಾನಿಕ, ಪರಿಸರ, ಆರೋಗ್ಯ, ಕೃಷಿ ಮತ್ತು ಹಸುವಿನ ಆಧ್ಯಾತ್ಮಿಕ ಪ್ರಸ್ತುತತೆ ಕುರಿತು ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪರೀಕ್ಷೆ ಆಯೋಜಿಸಲಾಗಿದೆ’ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್‌ ಜೈನ್‌ ಅವರು ಕುಲಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT