ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಮೇಶ್ ಪಾಲ್ ಹತ್ಯೆ: ಅತೀಕ್ ಅರ್ಜಿ ವಿಚಾರಣೆ ಮುಂದೂಡಿಕೆ

Last Updated 17 ಮಾರ್ಚ್ 2023, 13:43 IST
ಅಕ್ಷರ ಗಾತ್ರ

ನವದೆಹಲಿ: ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್‌ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಮಾಜಿ ಸಂಸದ ಮತ್ತು ಪಾತಕಿ ಅತೀಕ್ ಅಹ್ಮದ್ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದೂಡಿದೆ.

ಹೇಳಿಕೆಗಳನ್ನು ಒಳಗೊಂಡ ಕೆಲವು ಹೆಚ್ಚುವರಿ ದಾಖಲೆ ಸಲ್ಲಿಸಲು ಅತೀಕ್‌ ಅವರ ವಕೀಲರು ಸಮಯ ಕೋರಿದ ನಂತರ ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ ತ್ರಿವೇದಿ ಪೀಠವು ವಿಚಾರಣೆ ಮುಂದೂಡಿತು.

‘ಮುಖ್ಯ ನ್ಯಾಯಮೂರ್ತಿ ಎದುರು ತುರ್ತು ವಿಚಾರಣೆಗೆ ಪ್ರಸ್ತಾಪಿಸಿದ ನಂತರ ವಿಷಯವನ್ನು ಪಟ್ಟಿ ಮಾಡಲಾಗಿದೆ. ವಕೀಲರುವ ಸಮಯ ಕೋರಿದ್ದಾರೆ. ಒಂದು ವಾರದ ನಂತರ ಪಟ್ಟಿ ಮಾಡಿ’ ಎಂದು ಪೀಠ ಹೇಳಿದೆ.

ಪ್ರಸ್ತುತ ಗುಜರಾತ್‌ನ ಅಹಮದಾಬಾದ್‌ ಕೇಂದ್ರ ಕಾರಾಗೃಹದಲ್ಲಿರುವ ಅಹ್ಮದ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ತನ್ನನ್ನು ನಾಶಪಡಿಸಲು ಮತ್ತು ತನ್ನ ಕುಟುಂಬ ಸದಸ್ಯರ ಜೀವಕ್ಕೆ ಬೆದರಿಕೆ ಇದೆ ಎಂದು ಹೇಳಿದ್ದಾರೆ.

ಪೊಲೀಸ್ ಕಸ್ಟಡಿ ಅಥವಾ ವಿಚಾರಣೆಯ ಸಮಯದಲ್ಲಿ ತನಗೆ ಯಾವುದೇ ರೀತಿಯಲ್ಲಿ ದೈಹಿಕ ಗಾಯ ಅಥವಾ ಹಾನಿಯಾಗದಂತೆ ನೋಡಿಕೊಳ್ಳಲು ನಿರ್ದೇಶನಗಳನ್ನು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT