ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಮೇಶ್‌ ಪಾಲ್ ಹತ್ಯೆ ಪ್ರಕರಣ: ಅತೀಕ್‌, ಸಹೋದರ ಅಶ್ರಫ್‌ಗೆ 14 ದಿನ ನ್ಯಾಯಾಂಗ ಬಂಧನ

Last Updated 13 ಏಪ್ರಿಲ್ 2023, 14:03 IST
ಅಕ್ಷರ ಗಾತ್ರ

ಪ್ರಯಾಗರಾಜ್‌, ಉತ್ತರ ಪ್ರದೇಶ: ಉಮೇಶ್‌ ಪಾಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಾತಕಿ ಹಾಗೂ ಮಾಜಿ ಸಂಸದ ಅತೀಕ್‌ ಅಹ್ಮದ್, ಆತನ ಸಹೋದರ ಅಶ್ರಫ್‌ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದೆ.

ಅಲ್ಲದೇ, ಇಬ್ಬರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲು ಮುಖ್ಯ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್ ದಿನೇಶ್‌ ಗೌತಮ್ ಅನುಮತಿ ನೀಡಿದರು.

‘ಅಹ್ಮದ್‌ ಹಾಗೂ ಅಶ್ರಫ್‌ ಅಲಿಯಾಸ್‌ ಖಾಲಿದ್‌ ಅಜಿಮ್ ಅವರನ್ನು ಏಪ್ರಿಲ್ 26ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಉಮೇಶ್‌ ಪಾಲ್‌ ಪತ್ನಿ ಜಯಾ ಅವರ ವಕೀಲ ವಿಕ್ರಮ್‌ ಸಿಂಗ್‌ ಸುದ್ದಿಗಾರರಿಗೆ ತಿಳಿಸಿದರು.

‘ವಾದ–ಪ್ರತಿವಾದ ಆಲಿಸಿದ ಕೋರ್ಟ್, ಪೊಲೀಸರ ಮನವಿಯಂತೆ ಆರೋಪಿಗಳನ್ನು ಏ.17ರ ವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲು ಒಪ್ಪಿಗೆ ನೀಡಿತು. ಪೊಲೀಸ್‌ ಕಸ್ಟಡಿ ಅವಧಿ ಅಂತ್ಯಗೊಂಡ ಬಳಿಕ ಅಹ್ಮದ್‌ನನ್ನು ಸಬರ್‌ಮತಿ ಜೈಲಿಗೆ ಹಾಗೂ ಅಶ್ರಫ್‌ನನ್ನು ಬರೇಲಿ ಜೈಲಿಗೆ ಕಳುಹಿಸಲಾಗುತ್ತದೆ’ ಎಂದು ವಕೀಲ ಸಿಂಗ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT