ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆ ಭದ್ರತಾ ಮಂಡಳಿ: ನೂತನ ಸದಸ್ಯ ರಾಷ್ಟ್ರಗಳಿಗೆ ಸ್ವಾಗತ

Last Updated 5 ಜನವರಿ 2021, 7:34 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಭಾರತವೂ ಸೇರಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಐದು ನೂತನ ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳಿಗೆ, ಮಂಡಳಿಯ ಇತರೆ ರಾಷ್ಟ್ರಗಳ ಸದಸ್ಯರು ಆತ್ಮೀಯವಾಗಿ ಸ್ವಾಗತ ಕೋರಿದರು.

ಮಂಡಳಿಯಲ್ಲಿ ತನ್ನ ಅಧಿಕಾರವಧಿಯಲ್ಲಿ ಐದು ರಾಷ್ಟ್ರಗಳು ವಿಶ್ವದಲ್ಲಿ ಶಾಂತಿ ಸ್ಥಾಪನೆ, ಭದ್ರತೆಗೆ ಒತ್ತು ನೀಡಲಿವೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 75ನೇ ಅಧಿವೇಶನದ ಅಧ್ಯಕ್ಷ ವೋಲ್ಕನ್ ಬೋಜ್‌ಕಿರ್ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಭದ್ರತಾ ಮಂಡಳಿಗೆ ಸ್ವಾಗತ ಎಂದು ತಿಳಿಸಿದ್ದಾರೆ.

‘ಹೊಸ ಸದಸ್ಯ ರಾಷ್ಟ್ರಗಳಿಗೆ ಅಭಿನಂದನೆ. ತಮ್ಮ ಎರಡು ವರ್ಷಗಳ ಅವಧಿಯಲ್ಲಿ ಈ ದೇಶಗಳು ತಮ್ಮ ಕೆಲಸದಲ್ಲಿ ಯಶಸ್ಸು ಕಾಣಲಿ ಹಾಗೂ ಜಾಗತಿಕ ಶಾಂತಿ ಮತ್ತು ಅಭ್ಯುದಯಕ್ಕೆ ಸಹಕರಿಸಲಿ’ ಎಂದು ಆಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT