ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಪಬ್ಜಿ ಆಡಲು ಸಾಧ್ಯವಾಗದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ

Last Updated 7 ಸೆಪ್ಟೆಂಬರ್ 2020, 6:14 IST
ಅಕ್ಷರ ಗಾತ್ರ

ಕೋಲ್ಕತ್ತ: ಪಬ್ಜಿ ಆಡಲು ಸಾಧ್ಯವಾಗದ್ದರಿಂದಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ 21 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಐಟಿಐ ಕಲಿಯುತ್ತಿದ್ದ ಪ್ರೀತಮ್ ಹಲ್ದರ್ ಎಂದು ಗುರುತಿಸಲಾಗಿದೆ. ಈತ ಚಕ್‌ದಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಬಾ ಲಾಲ್‌ಪುರ್ ಪ್ರದೇಶದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶುಕ್ರವಾರ ಬೆಳಗ್ಗಿನ ಉಪಹಾರ ಸ್ವೀಕರಿಸಿದ ಬಳಿಕ ಆತ ಕೊಠಡಿಗೆ ತೆರಳಿದ್ದ ಎಂದು ಆತನ ತಾಯಿ ರತ್ನಾ ತಿಳಿಸಿದ್ದಾರೆ.

‘ಮಧ್ಯಾಹ್ನದ ಊಟಕ್ಕೆಂದು ಕರೆಯಲು ತೆರಳಿದಾಗ ಆತನ ಕೊಠಡಿ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು. ಪದೇಪದೇ ಕರೆದರೂ ಬಾಗಿಲು ತೆರೆಯದಿರುವುದರಿಂದ ನೆರೆ ಮನೆಯವರನ್ನು ಕರೆದೆ. ಅವರು ಬಾಗಿಲು ಒಡೆದು ಕೊಠಡಿ ಪ್ರವೇಶಿಸಿದಾಗ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಾಣಿಸಿತು’ ಎಂದು ಅವರು ತಿಳಿಸಿದ್ದಾರೆ.

ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಮ್ ರಾತ್ರಿ ಪಬ್ಜಿ ಆಡುತ್ತಿದ್ದ. ಆ್ಯಪ್ ನಿಷೇಧದ ಬಳಿಕಆಡಲು ಸಾಧ್ಯವಾಗದಿರುವುದರಿಂದ ಹತಾಶನಾಗಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ರತ್ನಾ ಹೇಳಿದ್ದಾರೆ.

ಪಬ್ಜಿ, ಪಬ್ಜಿ ಮೊಬೈಲ್ ಲೈಟ್, ವಿಚಾಟ್ ವರ್ಕ್‌, ವಿಚಾಟ್ ರೀಡಿಂಗ್ ಸೇರಿದಂತೆ 118 ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ನಿಷೇಧಿಸಿತ್ತು. ದೇಶದ ರಕ್ಷಣೆ, ಸಾರ್ವಭೌಮತ್ವ, ಸಮಗ್ರತೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT