ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ: ಮುರ್ಮು ಅವಿರೋಧ ಆಯ್ಕೆಯಾಗಲಿ -ಆರೆಸ್ಸೆಸ್ ಅಂಗಸಂಸ್ಥೆ ಮನವಿ

Last Updated 23 ಜೂನ್ 2022, 13:18 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಿದ ಬಿಜೆಪಿ ನೇತೃತ್ವದ ಎನ್‌ಡಿಎ ನಿರ್ಧಾರವನ್ನು ಆರೆಸ್ಸೆಸ್ ಅಂಗಸಂಸ್ಥೆ 'ಅಖಿಲ ಭಾರತೀಯ ವನವಾಸಿ ಕಲ್ಯಾಣ ಆಶ್ರಮ'ವುಸ್ವಾಗತಿಸಿದೆ. ಅಲ್ಲದೆ, ಮುರ್ಮು ಅವರನ್ನು ಒಮ್ಮತದಿಂದ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಬುಡಕಟ್ಟು ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಪರ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಎಲ್ಲಾ ರಾಜಕೀಯ ಪಕ್ಷಗಳಿಗೆ ಅಖಿಲ ಭಾರತೀಯ ವನವಾಸಿ ಕಲ್ಯಾಣ ಆಶ್ರಮ ಮನವಿ ಮಾಡಿದೆ.

ಈ ಸಂಬಂಧ ಗುರುವಾರ ಹಿಂದಿಯಲ್ಲಿ ಹೇಳಿಕೆ ಬಿಡುಗಡೆ ಮಾಡಿದ ಆರೆಸ್ಸೆಸ್ ಅಂಗಸಂಸ್ಥೆಯು, ಭಾರತದ ಸಾಂಪ್ರದಾಯಿಕ ಮತ್ತು ಸಂಸ್ಕೃತಿಯ ಭಾಗವಾಗಿರುವ ಹೊರತಾಗಿಯೂ, ಬುಡಕಟ್ಟು ಸಮಾಜವು ಹಲವು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೆ ಒಳಗಾಗಬೇಕಾಗಿತ್ತು. ಇದೀಗ ಮುರ್ಮು ಅವರನ್ನು ಎನ್‌ಡಿಎನ ರಾಷ್ಟ್ರಪತಿ ಅಭ್ಯರ್ಥಿಯಾಗಿಸಿರುವುದು ಸಾಮಾಜಿಕ ಬದಲಾವಣೆ ತರುವ ಕ್ರಮವಾಗಿದೆ ಎಂದು ಹೇಳಿದೆ.ಭಾರತದಲ್ಲಿ 12 ಕೋಟಿ ಬುಡಕಟ್ಟು ಜನರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT