ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಚುನಾವಣೆಯನ್ನು ಭದ್ರತೆ ದೃಷ್ಟಿಯಲ್ಲಿ ನೋಡಬೇಕು: ಅಮಿತ್ ಶಾ

Last Updated 16 ನವೆಂಬರ್ 2022, 11:29 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯನ್ನು ಭದ್ರತೆಯ ದೃಷ್ಟಿಯಲ್ಲಿ ನೋಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತಾ ಶಾ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಮುಂದಿನ ವರ್ಷದ ಏಪ್ರಿಲ್‌ವರೆಗೆ ಚುನಾವಣೆ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ.

ಟಿ.ವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಶಾ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರದಲ್ಲೇಚುನಾವಣೆ ನಡೆಯಲಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಆದರೆ, ನಾವು ಈ ಚುನಾವಣೆಯನ್ನು ಭದ್ರತೆ ದೃಷ್ಟಿಯಲ್ಲಿ ನೋಡಬೇಕು. ಈ ಬಗ್ಗೆ ಚುನಾವಣಾ ಆಯೋಗವೇ ನಿರ್ಧರಿಸಬೇಕಾಗುತ್ತದೆ ಎಂದು ತಿಳಿಸಿದ್ದರು.

ಬಿಜೆಪಿ–ಪಿಡಿಪಿ ಮೈತ್ರಿಕೂಟದಿಂದ ಬಿಜೆಪಿಯು 2018ರಲ್ಲಿ ಹೊರಬಂದ ಕಾರಣ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ, ರಾಜ್ಯವಾಗಿದ್ದ ಜಮ್ಮು ಮತ್ತು ಕಾಶ್ಮೀರವನ್ನು ಲಡಾಖ್‌, ಜಮ್ಮು ಮತ್ತು ಕಾಶ್ಮೀರ ಎಂದು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ವರ್ಷಗಳ ನಂತರ ಚುನಾವಣೆ ಬಗ್ಗೆ ಮಾತುಕತೆ ನಡೆದಿದ್ದು, ಆಯೋಗವು ಮತದಾರರ ಪರಿಷ್ಕೃತ ಪಟ್ಟಿಯನ್ನು ನವೆಂಬರ್‌ 25ರ ಒಳಗೆ ಅಂತಿಮಗೊಳಿಸಬೇಕಾಗಿದೆ. ಚುನಾವಣೆ ನಡೆಸಬೇಕು ಎಂಬ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಶಾ ಅವರು ಚುನಾವಣೆಗೆ ಭದ್ರತೆ ಮುಖ್ಯ ಎಂದು ಹೇಳಿರುವುದನ್ನು ನೋಡಿದರೆ ಕೇಂದ್ರಕ್ಕೆ ಚುನಾವಣೆ ನಡೆಸಲು ಆಸಕ್ತಿ ಇದ್ದಂತೆ ಕಾಣುತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT