ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಿಗೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್‌ಗೆ ಎರಡು ವರ್ಷ ಜೈಲು

Last Updated 4 ಜನವರಿ 2021, 9:46 IST
ಅಕ್ಷರ ಗಾತ್ರ

ಮುಂಬೈ: ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ ಮತ್ತು ಆತನ ಮೂವರು ಸಹಚರರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಮುಂಬೈನ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ.

2015ರ ಅಕ್ಟೋಬರ್‌ನಲ್ಲಿ ಇಂಡೊನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ರಾಜನ್‌ನನ್ನು ಬಂಧಿಸಿ, ಕರೆದುಕೊಂಡು ಬಂದಿದ್ದರು. ಆತನನ್ನು ಸದ್ಯ ದೆಹಲಿಯ ತಿಹಾರ್‌ ಜೈಲಿನಲ್ಲಿ ಇರಿಸಲಾಗಿದೆ.

75 ಅಪರಾಧಗಳ ಪೈಕಿ ‘ಟಾಡಾ’ದಡಿ ನಾಲ್ಕು, ‘ಪೊಟಾ’ದಡಿ ಒಂದು (ಭಯೋತ್ಪಾದನೆ ತಡೆ ಕಾಯ್ದೆ) ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಮೊಕಾ) 20ಕ್ಕೂ ಹೆಚ್ಚು ಪ್ರಕರಣಗಳು ರಾಜನ್‌ ವಿರುದ್ಧ ದಾಖಲಾಗಿವೆ.

ವಿದೇಶದಲ್ಲಿದ್ದುಕೊಂಡೇ ಭೂಗತ ಲೋಕದ ವ್ಯವಹಾರ ನಿಯಂತ್ರಿಸುತ್ತಿದ್ದ ರಾಜನ್‌ಗೂ ಮತ್ತೊಬ್ಬ ಕುಖ್ಯಾತ ಪಾತಕಿ ದಾವೂದ್‌ ಇಬ್ರಾಹಿಂಗೂ ಮುಂಬೈ ಭೂಗತ ಜಗತ್ತಿನ ಮೇಲೆ ಹಿಡಿತ ಸಾಧಿಸಲು ಪೈಪೋಟಿ ನಡೆದಿತ್ತು.

ಭೂಗತ ಲೋಕಕ್ಕೆ ಪ್ರವೇಶಿಸುವ ಮೊದಲು ರಾಜೇಂದ್ರ ನಿಕಲಾಜೆಯಾಗಿದ್ದ ರಾಜನ್, 1970ರಲ್ಲಿ ಚೇಂಬೂರ್‌ ಬಳಿಯ ಸಿನಿಮಾ ಮಂದಿರಗಳ ಮುಂದೆ ಬ್ಲ್ಯಾಕ್‌ ಟಿಕೆಟ್ ಮಾರಾಟ ಮಾಡುತ್ತಿದ್ದ. ಜತೆಗೆ ಸಣ್ಣಪುಟ್ಟ ಅಪರಾಧ ಕೃತ್ಯಗಳ ಜತೆಗೆ ಕಳ್ಳಬಟ್ಟಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದ. ದಾವೂದ್‌ ಗ್ಯಾಂಗ್‌ (ಡಿ–ಗ್ಯಾಂಗ್‌) ಸೇರಿಕೊಂಡ ನಂತರ ‘ಛೋಟಾ ರಾಜನ್‌’ ಎಂದು ಕುಖ್ಯಾತನಾದ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT