ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಅಡಿಯಲ್ಲಿ ನಿರುದ್ಯೋಗ, ಬಡತನ, ‘ಆಪ್ತರ’ ಆದಾಯ ಹೆಚ್ಚಿದೆ: ರಾಹುಲ್‌ ಗಾಂಧಿ

Last Updated 20 ಮಾರ್ಚ್ 2021, 7:53 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ‘ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇನ್ನೊಂದೆಡೆ, ಕೇಂದ್ರ ಸರ್ಕಾರದ ಆಪ್ತರ ಆದಾಯವೂ ಹೆಚ್ಚಾಗಿದೆ’ ಎಂದು ಟೀಕಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಈ ಸರ್ಕಾರ ಏನು ಹೆಚ್ಚಳ ಮಾಡಿದೆ? ನಿರುದ್ಯೋಗ, ಹಣದುಬ್ಬರ ಮತ್ತು ಬಡತನ ಹೆಚ್ಚು ಮಾಡಿದೆ. ತನ್ನ ಆಪ್ತರ ಗಳಿಕೆಯನ್ನು ಹೆಚ್ಚಿಸಿದೆ’ ಎಂದಿದ್ದಾರೆ.

‘ಕೋವಿಡ್‌ ಬಿಕ್ಕಟ್ಟು ಆರಂಭಕ್ಕೂ ಮುನ್ನ ದೇಶದಲ್ಲಿ ಮಧ್ಯಮ ವರ್ಗದ ಜನಸಂಖ್ಯೆ 9.9 ಕೋಟಿ ಇತ್ತು. ಕೋವಿಡ್‌ ಪಿಡುಗು ಕಾಣಿಸಿಕೊಂಡ ನಂತರ ಅವರ ಸಂಖ್ಯೆ 6.6 ಕೋಟಿಗೆ ಇಳಿದಿದೆ’ ಎಂಬ ಮಾಧ್ಯಮ ವರದಿಯೊಂದನ್ನು ಅವರು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT