ಶುಕ್ರವಾರ, ಆಗಸ್ಟ್ 19, 2022
22 °C

ಸಂಸತ್ತಿನಲ್ಲಿ ನಮ್ಮ ಧ್ವನಿ ಕೇಳಬೇಕಿದೆ: ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರುದ್ಯೋಗ, ವಲಸೆ ಕಾರ್ಮಿಕರ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ಸನ್ನಿವೇಶದ ಕುರಿತು ಮುಂಬರುವ ಅಧಿವೇಶನದಲ್ಲಿ ಚರ್ಚಿಸಲು ನಾವು ಪ್ರಸ್ತಾಪಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ತಿಳಿಸಿದ್ದಾರೆ.

ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, 'ನಿರುದ್ಯೋಗ, ವಲಸೆ ಕಾರ್ಮಿಕರ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ಸನ್ನಿವೇಶದ ಕುರಿತು ಮುಂಬರುವ ಅಧಿವೇಶನದಲ್ಲಿ ಚರ್ಚಿಸಲು ನಾವು ಪ್ರಸ್ತಾಪಿಸಿದ್ದೇವೆ. ನಮ್ಮ ಧ್ವನಿ ಸಂಸತ್ತಿನಲ್ಲಿ ಕೇಳಬೇಕಿದೆ. ಈ ವಿಚಾರವಾಗಿ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದೇವೆ' ಎಂದು ಅಧೀರ್‌ ಚೌಧರ್‌ ಹೇಳಿದ್ದಾರೆ. 

'ನಾವು ಎತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 15 ರಂದು ಸ್ಪೀಕರ್ ಅವರು ವ್ಯಾವಹಾರಿಕ ಸಲಹಾ ಸಮಿತಿಯ ಮತ್ತೊಂದು ಸಭೆಯನ್ನು ಕರೆಯಲಿದ್ದಾರೆ' ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿ ರಾಜ್ಯಸಭಾ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಇದರ  ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು