ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ಪಂಗಡಕ್ಕೆ: ಕೇಂದ್ರ ಸಚಿವ ಸಂಪುಟ ಅಸ್ತು

Last Updated 14 ಸೆಪ್ಟೆಂಬರ್ 2022, 14:15 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂಬಂಧ ಕರ್ನಾಟಕ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಇದೀಗ ಅನುಮೋದಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು.‌ ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT