ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾದರಿ ಬಾಡಿಗೆ ಕಾಯ್ದೆ’ಗೆ ಕೇಂದ್ರ ಸಂಪುಟ ಅಸ್ತು

Last Updated 2 ಜೂನ್ 2021, 14:20 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯು ‘ಮಾದರಿ ಬಾಡಿಗೆ ಕಾಯ್ದೆ’ಗೆ ಅನುಮೋದನೆ ನೀಡಿದೆ.

ಮನೆಗಳನ್ನು ಬಾಡಿಗೆ ಆಧಾರದಲ್ಲಿ ನೀಡುವುದಕ್ಕೆ ಸಂಬಂಧಿಸಿದ ಕಾನೂನಿನಲ್ಲಿ ಸಮಗ್ರ ಬದಲಾವಣೆ ತರುವುದು ‘ಮಾದರಿ ಬಾಡಿಗೆ ಕಾಯ್ದೆ’ಯಿಂದ ಸಾಧ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

‘ಸದ್ಯ ಚಾಲ್ತಿಯಲ್ಲಿರುವ ಬಾಡಿಗೆ ಕಾಯ್ದೆಗೆ ಹೊಸದಾಗಿ ನಿಯಮಗಳನ್ನು ರಚಿಸಲು ಅಥವಾ ಈಗಿರುವ ನಿಯಮಗಳಿಗೆ ತಿದ್ದುಪಡಿ ತರಲು ಅನುವು ಮಾಡಿ ಕೊಡುವ ಈ ಮಾದರಿ ಬಾಡಿಗೆ ಕಾಯ್ದೆಯನ್ನು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲು ಸಹ ಸಂಪುಟ ಒ‍ಪ್ಪಿಗೆ ನೀಡಿತು’ ಎಂದು ಪ್ರಕಟಣೆ ತಿಳಿಸಿದೆ.

ಮನೆಗಳನ್ನು ಬಾಡಿಗೆ ನೀಡುವ ವ್ಯವಸ್ಥೆಗೆ ಉದ್ಯಮ ಸ್ವರೂಪ ನೀಡುವುದು. ಈ ಉದ್ಯಮದಲ್ಲಿ ಪಾಲ್ಗೊಳ್ಳುವಂತೆಖಾಸಗಿ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶ ಇದೆ. ಇದರಿಂದ ವಸತಿ ಕ್ಷೇತ್ರ ಎದುರಿಸುತ್ತಿರುವ ಕೊರತೆಯನ್ನು ನೀಗಿಸಲು ಸಾಧ್ಯವಾಗಲಿದೆ ಎಂಬ ನಿರೀಕ್ಷೆ ಇದೆ ಎಂದೂ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT