ಸಂಪುಟ ಪುನರ್‌ರಚನೆ: ಡಿ.ವಿ.ಸದಾನಂದಗೌಡ ಸೇರಿ 12 ಸಚಿವರ ರಾಜೀನಾಮೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹಲವು ಮಂದಿ ಹೊಸಬರಿಗೆ ಸಚಿವ ಸ್ಥಾನ ದೊರೆಯಲಿದೆ.
ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡಲಾಗಿದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಹರ್ಷವರ್ಧನ್, ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್ ಸೇರಿದಂತೆ 10 ಮಂದಿ ಸಚಿವರು ರಾಜೀನಾಮೆ ನೀಡಿದ್ದಾರೆ.
ಓದಿ: ಇಂದು ಸಂಜೆ 6ಕ್ಕೆ ಕೇಂದ್ರ ಸಂಪುಟ ಪುನರ್‌ರಚನೆ: ಶೋಭಾ ಕರಂದ್ಲಾಜೆಗೂ ಅವಕಾಶ
ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್, ರಾಜ್ಯ ಖಾತೆ ಸಚಿವರಾದ ರಾವೋಸಾಹೇಬ್ ದನ್ವೆ, ಸಂಜಯ್ ಧೋತ್ರೆ ಮತ್ತು ದೇಬಶ್ರೀ ಚೌಧರಿ ಸಹ ರಾಜೀನಾಮೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.