ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಯ ಪಾಲಿಸದ ಸರ್ಕಾರ: ಗಡ್ಕರಿ

ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳದ ಸರ್ಕಾರದ ವರ್ತನೆಗೆ ಆಕ್ಷೇಪ
Last Updated 23 ಆಗಸ್ಟ್ 2022, 19:51 IST
ಅಕ್ಷರ ಗಾತ್ರ

ಮುಂಬೈ: ಕೇಂದ್ರ ಸರ್ಕಾರವು ಸೂಕ್ತ ಸಮಯಕ್ಕೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಬಿಜೆಪಿ ಸಂಸದೀಯ ಮಂಡಳಿಯಿಂದ ತಮ್ಮನ್ನು ಕೈಬಿಟ್ಟ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವನ್ನು ಗಡ್ಕರಿ ಅವರು ಗುರಿಯಾಗಿಸಿದಂತೆ ತೋರುತ್ತಿದೆ.

ಸಿವಿಲ್ ಎಂಜಿನಿಯರ್ಸ್ ಸಂಘಟನೆಯ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಗುಣಮಟ್ಟದಲ್ಲಿ ರಾಜಿಯಾಗದೆ, ಪರ್ಯಾಯವಾಗಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ವೆಚ್ಚವನ್ನು ಕಡಿಮೆ ಮಾಡಬಹುದು. ನಿರ್ಮಾಣ ಕ್ಷೇತ್ರದಲ್ಲಿ ಸಮಯ ಮಹತ್ವದ ಪಾತ್ರ ವಹಿಸುತ್ತದೆ. ಸಮಯವೇ ದೊಡ್ಡ ಬಂಡವಾಳ. ಸಮಸ್ಯೆ ಎಂದರೆ, ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ’ ಎಂದು ಹೇಳಿದರು.

ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಇರುವ ನಾಗ್ಪುರ ಮೂಲದವರಾದ ಗಡ್ಕರಿ ಅವರು ಈ ಹಿಂದೆ ನೀಡಿದ್ದ ಕೆಲವು ಹೇಳಿಕೆಗಳು ಬಿಜೆಪಿ ನಾಯಕರಿಗೆ ಇಷ್ಟವಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT