ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರದ ಭದ್ರತೆ ಪರಿಶೀಲನೆ: ಶ್ರೀನಗರಕ್ಕೆ ಆಗಮಿಸಿದ ಅಮಿತ್ ಶಾ

Last Updated 23 ಅಕ್ಟೋಬರ್ 2021, 7:22 IST
ಅಕ್ಷರ ಗಾತ್ರ

ಶ್ರೀನಗರ:ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಅವಲೋಕನದ ಸಲುವಾಗಿ ಶ್ರೀನಗರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಕಾಲ ಅವರು ಕಣಿವೆ ರಾಜ್ಯದಲ್ಲಿ ಉಳಿದುಕೊಳ್ಳಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ಬಳಿಕ ಮತ್ತು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆಶಾ ಇಲ್ಲಿಗೆ ಆಗಮಿಸಿದ್ದಾರೆ.

ಗೃಹ ಸಚಿವರಭೇಟಿ ಹಿನ್ನಲೆಯಲ್ಲಿಕಾಶ್ಮೀರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಅಮಿತ್ ಶಾ ಅವರು ಭೇಟಿ ನೀಡುವ ಸಾಧ್ಯತೆ ಇರುವುದರಿಂದಇಲ್ಲಿನ ಜವಾಹರ್‌ ನಗರ್‌ನಲ್ಲಿರುವ ಬಿಜೆಪಿ ಕಚೇರಿ ಸುತ್ತಲೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.ಶೇರ್‌-ಐ-ಕಾಶ್ಮೀರ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ (ಎಸ್‌ಕೆಐಸಿಸಿ) ನಡೆಯುವ ಕಾರ್ಯಕ್ರಮಕ್ಕೆ ಅವರು ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ಇಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿನ ಸಂಚಾರಕ್ಕೆ ಶನಿವಾರದಿಂದ ಮೂರುದಿನಗಳವರೆಗೆ ಮಿತಿಹೇರಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಣಿವೆಯಾದ್ಯಂತ ಮುಖ್ಯವಾಗಿ ಶ್ರೀನಗರದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT