ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ರಾಜ್ಯಗಳಲ್ಲಿ ಎನ್‌ಐಎ ದಾಳಿ, 106 ಮಂದಿ ವಶಕ್ಕೆ: ಅಧಿಕಾರಿಗಳ ಜೊತೆ ಶಾ ಸಭೆ

Last Updated 22 ಸೆಪ್ಟೆಂಬರ್ 2022, 7:46 IST
ಅಕ್ಷರ ಗಾತ್ರ

ನವದೆಹಲಿ: ಭಯೋತ್ಪಾದನೆಗೆ ಕುಮ್ಮಕ್ಕು ಆರೋಪದಡಿ ದೇಶದ 10 ರಾಜ್ಯಗಳಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ, ಎಸ್‌ಡಿಪಿಐ ಕಚೇರಿಗಳು ಮತ್ತು ವ್ಯಕ್ತಿಗಳ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯದ( ಇ.ಡಿ) ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

ದೇಶದ 11 ರಾಜ್ಯಗಳಲ್ಲಿ ದಾಳಿ ನಡೆದಿದ್ದು,106ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೇರಳದಲ್ಲಿ ಗರಿಷ್ಠ ಸಂಖ್ಯೆಯ 22 ಮಂದಿಯನ್ನು ಬಂಧನ ಮಾಡಲಾಗಿದೆ, ಮಹಾರಾಷ್ಟ್ರ ಮತ್ತು ಕರ್ನಾಟಕ ತಲಾ 20, ತಮಿಳುನಾಡು 10, ಅಸ್ಸಾಂ 9, ಉತ್ತರ ಪ್ರದೇಶ 8, ಆಂಧ್ರಪ್ರದೇಶ 5, ಮಧ್ಯಪ್ರದೇಶ 4, ಪುದುಚೇರಿ ಮತ್ತು ದೆಹಲಿಯಲ್ಲಿ ತಲಾ 3 ಮತ್ತು ರಾಜಸ್ಥಾನ ಇಬ್ಬರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಇಲ್ಲಿಯವರೆಗಿನ ಅತಿದೊಡ್ಡ ತನಿಖಾ ಪ್ರಕ್ರಿಯೆ ಇದಾಗಿದೆ.

ಈ ಮಧ್ಯೆ, ಈ ಸಂಬಂಧಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತಾ ಶಾ, ಎನ್‌ಎಸ್‌ಎ ಡಿಜಿ, ಗೃಹ ಸಚಿವಾಲಯದ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರ ಜೊತೆ ಸಭೆ ನಡೆಸಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್‌ನ ಪಿಎಫ್‌ಐ ಕಚೇರಿಯನ್ನು ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) ಸೀಲ್ ಮಾಡಿದೆ. ಸಂಘಟನೆಗೆ ಸಂಬಂಧಿಸಿದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ದಾಖಲೆಗಳು, ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳನ್ನು ಜಪ್ತಿಮಾಡಲಾಗಿದೆ.

ಆಂಧ್ರ ಪ್ರದೇಶದ ಎಸ್‌ಡಿಪಿಐ ಮುಖಂಡನ ಮನೆ ಮೇಲೆ ದಾಳಿ ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಸ್ ಡಿಪಿಐ ಕಚೇರಿ ಹಾಗೂ ಎಸ್ ಡಿಪಿಐ ಜಿಲ್ಲಾ ಘಟಕದ ಪ್ರಮುಖರ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಎಸ್ ಡಿಪಿಐ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT