ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಪಿ. ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿಗೆ ಅಮಿತ್ ಶಾ ಖಂಡನೆ

Last Updated 10 ಡಿಸೆಂಬರ್ 2020, 14:18 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಡೆದ ಕಲ್ಲು ತೂರಾಟವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಟು ಶಬ್ದಗಳಿಂದ ಖಂಡಿಸಿದ್ದಾರೆ.

ಇಂದು ಬಂಗಾಳದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮೇಲೆ ನಡೆದ ದಾಳಿ ಅತ್ಯಂತ ಖಂಡನಾರ್ಹ. ಈ ಬಗ್ಗೆ ಎಷ್ಟು ಟೀಕೆ ಮಾಡಿದರೂ ಕಡಿಮೆಯೆ. ಘಟನೆಯನ್ನ ಕೇಂದ್ರ ಸರ್ಕಾರ ಸಂಪೂರ್ಣ ಗಂಭೀರವಾಗಿ ಪರಿಗಣಿಸುತ್ತದೆ. ಪಶ್ಚಿಮ ಬಂಗಾಳ ಸರ್ಕಾರ ಪ್ರಾಯೋಜಿತ ಈ ಹಿಂಸಾಚಾರದ ಕುರಿತಂತೆ ಅಲ್ಲಿನ ಶಾಂತಿ ಪ್ರಿಯ ಜನರಿಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದ್ದಾರೆ.

ಜೆ.ಪಿ.ನಡ್ಡಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗೀಯ ಜೊತೆ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಕೋಲ್ಕತ್ತಾದಿಂದ ಡೈಮಂಡ್ ಹಾರ್ಬರ್ ಕಡೆಗೆ ತೆರಳುತ್ತಿದ್ದ ಸಂದರ್ಭ, ಅಡ್ಡಗಟ್ಟಿದ ಟಿಎಂಸಿ ಕಾರ್ಯಕರ್ತರು, ಜೆ.ಪಿ. ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂದರ್ಭ ಮಾಧ್ಯಮಗಳ ವಾಹನಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT