ಸೋಮವಾರ, ಸೆಪ್ಟೆಂಬರ್ 20, 2021
27 °C

ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಸೇವಾವಧಿ ಒಂದು ವರ್ಷ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವಾ ಅವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಅಸ್ಸಾಂ-ಮೇಘಾಲಯ ಕೇಡರ್‌ನ 1984 ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಭಲ್ಲಾಅವರನ್ನು 2019ರಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು.

60 ವರ್ಷ ತುಂಬಿದ್ದ ಹಿನ್ನೆಲೆಯಲ್ಲಿ ನವೆಂಬರ್ 2020ರಂದು ಭಲ್ಲಾ ಅವರು ನಿವೃತ್ತಿಯಾಗಬೇಕಿತ್ತು. ಆದರೆ, ಕಳೆದ ಅಕ್ಟೋಬರ್‌ನಲ್ಲಿ ಅವರ ಸೇವಾ ಅವಧಿಯನ್ನು ಸರ್ಕಾರ ಆಗಸ್ಟ್‌ 22 2021 ರವರೆಗೆ ವಿಸ್ತರಿಸಿತ್ತು. ಆ ಪ್ರಕಾರ ಮುಂದಿನವಾರ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು