ಕೋವಿಡ್–19 ಲಸಿಕೆ: ರಾಜ್ಯಗಳ ಜೊತೆ ಕೇಂದ್ರ ಗೃಹ ಕಾರ್ಯದರ್ಶಿ ಸಭೆ

ನವದೆಹಲಿ: ಕೋವಿಡ್–19 ಲಸಿಕೆ ಲಭ್ಯವಾದ ಬಳಿಕ ಅವುಗಳನ್ನು ವಿತರಿಸಲು ನಡೆಸಲಾದ ಸಿದ್ಧತೆಗಳ ಬಗ್ಗೆ ರಾಜ್ಯಗಳ ಹಿರಿಯ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಆದ್ಯತೆ ಮೇಲೆ ಲಸಿಕೆ ನೀಡಬೇಕಾದವರ ದತ್ತಾಂಶವನ್ನು ರಚಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಎಲ್ಲ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ರಾಜ್ಯ, ಕೇಂದ್ರಾಡಳಿತ ಪ್ರದೇಶದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಪೊಲೀಸರು, ಹೋಂಗಾರ್ಡ್, ಅಗ್ನಿ ಶಾಮಕ ದಳ, ಸಿವಿಲ್ ಡಿಫೆನ್ಸ್ನ ಸಿಬ್ಬಂದಿಯ ದತ್ತಾಂಶವನ್ನು ರೂಪಿಸಲು ಭಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.