ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ ಚುನಾವಣೆಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

Last Updated 8 ಸೆಪ್ಟೆಂಬರ್ 2021, 7:32 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ), ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್‌ ವಿಧಾನಸಭಾ ಚುನಾವಣೆಯ ಉಸ್ತುವಾರಿಯನ್ನಾಗಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಅವರನ್ನು ನೇಮಕ ಮಾಡಿದೆ.

ಚುನಾವಣೆಯ ಸಹ ಉಸ್ತುವಾರಿಗಳನ್ನಾಗಿ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಮತ್ತು ಮೀನಾಕ್ಷಿ ಲೇಖಿ ಮತ್ತು ಸಂಸದ ವಿನೋದ್ ಚಾವ್ಡಾ ಅವರನ್ನು ನೇಮಿಸಿದೆ.

ಮುಂದಿನ ವರ್ಷ, ಪಂಜಾಬ್‌ ಜೊತೆಗೆ, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯದಲ್ಲೂ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಪಂಜಾಬ್‌ನಲ್ಲಿ ಬಿಜೆಪಿಯು, ಕೃಷಿ ಕಾಯ್ದೆಗಳ ರದ್ಧತಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆಗಳನ್ನು ಎದುರಿಸಬೇಕಿದೆ. ಆಡಳಿತಾ‌ರೂಢ ಕಾಂಗ್ರೆಸ್‌, ಎಎಪಿ, ಶಿರೋಮಣಿ ಅಕಾಲಿ ದಳ– ಬಿಎಸ್‌ಪಿ ಮೈತ್ರಿ ಕೂಟದ ನಡುವೆ ಸ್ಪರ್ಧೆಗಿಳಿಯಲು ಬಿಜೆಪಿ ಸಜ್ಜಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT