ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿರುವ ಪಕ್ಷದ ಕಚೇರಿಗೆ ತೆರಳಿದ್ದ ಸಂದರ್ಭದಲ್ಲಿ ನಿಸಿತ್ ಪ್ರಮಾಣಿಕ್ ಅವರ ಎಸ್‌ಯುವಿ ಕಾರಿನ ಮೇಲೆ ದಾಳಿ ನಡೆದಿದ್ದು, ಕಾರಿನ ವಿಂಡ್ ಶೀಲ್ಡ್‌ಗೆ ಹಾನಿಯಾಗಿದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ದಾಳಿಯ ನೇತೃತ್ವ ವಹಿಸಿದ್ದರು ಎಂದು ಆರೋಪಿಸಿರುವ ಪ್ರಮಾಣಿಕ್, ‘ಸಚಿವರೊಬ್ಬರು ಸುರಕ್ಷಿತ ವಾತಾವರಣವಿಲ್ಲದಿದ್ದರೆ ಜನಸಾಮಾನ್ಯರ ಪರಿಸ್ಥಿತಿಯನ್ನು ಊಹಿಸಬಹುದು. ಈ ಘಟನೆಯು ಬಂಗಾಳದ ಪ್ರಜಾಪ್ರಭುತ್ವದ ಸ್ಥಿತಿಯನ್ನು ತೋರಿಸುತ್ತದೆ’ ಎಂದು ಟೀಕಿಸಿದ್ದಾರೆ.
ಸದ್ಯ ಘಟನಾಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
ಬುಡಕಟ್ಟು ಜನಾಂಗದವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮಾಣಿಕ್ ವಿರುದ್ಧ ಸ್ಥಳೀಯರು ಅಸಮಾಧಾನಗೊಂಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.