ಮುಂಬೈ: ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.
ನಾಗಪುರದ ಖಮ್ಲಾ ಪ್ರದೇಶದಲ್ಲಿರುವ ಸಾರ್ವಜನಿಕ ಸಂಪರ್ಕ ಕಚೇರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ತಾನು ದಾವೂದ್ ಇಬ್ರಾಹಿಂ ತಂಡದ ಸದಸ್ಯನೆಂದು ಹೇಳಿಕೊಂಡು ₹ 100 ಕೋಟಿಗೆ ಬೇಡಿಕೆ ಇಟ್ಟಿದ್ದಾನೆ. ಗಡ್ಕರಿ ಅವರ ಕಚೇರಿ ಮತ್ತು ನಿವಾಸದ ಭದ್ರತೆ ಹೆಚ್ಚಿಸಲಾಗಿದೆ.
ಕರೆ ಮಾಡಿದಾತ ತನ್ನ ಮೊಬೈಲ್ ಸಂಖ್ಯೆ ಮತ್ತು ಕರ್ನಾಟಕದ ವಿಳಾಸ ಹಂಚಿಕೊಂಡಿದ್ದು, ಅಲ್ಲಿಗೆ ಹಣ ಕಳುಹಿಸುವಂತೆ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಪೊಲೀಸರು ಗುರುತಿಸಿದ್ದು, ಕರ್ನಾಟಕಕ್ಕೆ ಪೊಲೀಸ್ ತಂಡ ಕಳುಹಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.