ಶುಕ್ರವಾರ, ಸೆಪ್ಟೆಂಬರ್ 25, 2020
25 °C

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Gadkari

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೋವಿಡ್-19  ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಿನ್ನೆ ನನಗೆ ನಿಶ್ಶಕ್ತಿ ಅನುಭವಕ್ಕೆ ಬಂದಾಗ ವೈದ್ಯರನ್ನು ಭೇಟಿ ಮಾಡಿದ್ದೆ. ನನ್ನ ಆರೋಗ್ಯ ತಪಾಸಣೆ ಮಾಡಿದಾಗ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.  ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆಯಿಂದ ಸದ್ಯ ನಾನು ಉತ್ತಮವಾಗಿದ್ದೇನೆ. ನಾನು ಇತರರಿಂದ ಪ್ರತ್ಯೇಕವಾಗಿದ್ದೇನೆ ಎಂದು ಗಡ್ಕರಿ ಟ್ವೀಟಿಸಿದ್ದಾರೆ.

 

 

ನನ್ನ ಸಂಪರ್ಕಕ್ಕೆ ಬಂದಿರುವವರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಇರಿ ಎಂದು ಗಡ್ಕರಿ ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು