ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ನ್ಯಾಯಸಮ್ಮತ ತನಿಖೆ: ಅಜಯ್ ಕುಮಾರ್ ಮಿಶ್ರಾ

Last Updated 6 ಅಕ್ಟೋಬರ್ 2021, 13:21 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿರುವ ಹಿಂಸಾಚಾರದ ಬಗ್ಗೆ ಹಲವು ತನಿಖಾ ಸಂಸ್ಥೆಗಳು ನ್ಯಾಯಸಮ್ಮತತನಿಖೆ ನಡೆಸಲಿವೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ. ಅವುಗಳ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಅವರು ಹೇಳಿದ್ದಾರೆ.

ತಮ್ಮ ಹಾಗೂ ಮಗನ ವಿರುದ್ಧದ ಆರೋಪಗಳು ಪ್ರತಿಪಕ್ಷಗಳ ಸಂಚು ಎಂದು ಅವರು ದೂರಿದ್ದಾರೆ.

ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಆಶಿಶ್ ಮಿಶ್ರಾ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಅಜಯ್‌ ಕುಮಾರ್ ಮಿಶ್ರಾ ಅವರು ಇಂದು (ಬುಧವಾರ) ಮಧ್ಯಾಹ್ನ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಗೃಹ ಸಚಿವರ ಕಚೇರಿಯಲ್ಲಿ ಮಿಶ್ರಾ ಸುಮಾರು ಅರ್ಧಗಂಟೆಗಳ ಕಾಲ ಇದ್ದರು ಎನ್ನಲಾಗಿದೆ. ಬಳಿಕ ಅವರು ಲಖಿಂಪುರ ಖೇರಿ ಹಿಂಸಾಚಾರದ ತನಿಖೆಗೆ ಸಂಬಂಧಿಸಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT