ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಮಾಡೆಲ್‌ಗೆ ಸಿಕ್ಕ ವಿಜಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Last Updated 8 ಡಿಸೆಂಬರ್ 2022, 7:34 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.

ಪ್ರಾಥಮಿಕ ಹಂತದ ಮಾಹಿತಿ ಪ್ರಕಾರ, 151 ಸ್ಥಾನಗಳಲ್ಲಿ ಮುನ್ನೆಡೆ ಸಾಧಿಸಿದೆ. ಕಾಂಗ್ರೆಸ್‌ 19, ಆಮ್‌ ಆ‌ದ್ಮಿ ಪಕ್ಷ 7ರಲ್ಲಿ ಮುನ್ನಡೆ ಸಾಧಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ‘ಇದು ಮತದಾನ ಇತಿಹಾಸದಲ್ಲಿ ಈವರೆಗಿನ ಅತಿದೊಡ್ಡ ದಾಖಲೆಯಾಗಿದೆ. 2000-2001ರಿಂದ ಗುಜರಾತ್‌ ಮಾದರಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಇದೇ ಮಾದರಿಯನ್ನು ರಾಷ್ಟ್ರದ ಎಲ್ಲೆಡೆ ನಾವು ಪ್ರಸ್ತುತಪಡಿಸುತ್ತಿದ್ದೇವೆ. ನಾನು ಗುಜರಾತ್‌ನ ಜನತೆ ಮತ್ತು ಬಿಜೆಪಿ ನಾಯಕರನ್ನು ಅಭಿನಂದಿಸುತ್ತೇನೆ’ ಎಂದು ಸುದ್ದಿಸಂಸ್ಥೆ 'ಎಎನ್‌ಐ'ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

27 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ಗುಜರಾತ್‌ನಲ್ಲಿ 7ನೇ ಬಾರಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಸಜ್ಜಾಗಿದೆ.

ಗುಜರಾತ್‌ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ನಡೆದಿತ್ತು. ಡಿ.1ರಂದು ನಡೆದಿದ್ದ ಮೊದಲ ಹಂತದ ಚುನಾವಣೆಯಲ್ಲಿ ಶೇ 63.31ರಷ್ಟು ಮತದಾನವಾಗಿತ್ತು. ಡಿ.5ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಶೇ 59.19ರಷ್ಟು ಮತದಾನವಾಗಿತ್ತು.

ಇವನ್ನೂಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT