ಮಂಗಳವಾರ, ಮೇ 17, 2022
27 °C

ಬ್ರಾಹ್ಮಣ ವ್ಯಕ್ತಿ ಮಹಾರಾಷ್ಟ್ರ ಸಿಎಂ ಆಗಬೇಕು: ಕೇಂದ್ರ ಸಚಿವ ದಾನ್ವೆ

ಪಿಟಿಐ Updated:

ಅಕ್ಷರ ಗಾತ್ರ : | |

ಔರಂಗಬಾದ್/ಮುಂಬೈ: ಬ್ರಾಹ್ಮಣ ಸಮುದಾಯದ ಸದಸ್ಯರೊಬ್ಬರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತೇನೆ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದಾನ್ವೆ ಅವರು ಹೇಳಿದ್ದಾರೆ. 

ಮಂಗಳವಾರ ರಾತ್ರಿ ಜಲ್ನಾ ಜಿಲ್ಲೆಯಲ್ಲಿ ಏರ್ಪಡಿಸಲಾಗಿದ್ದ ಪರಶುರಾಮ್ ಜಯಂತಿ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದ ದಾನ್ವೆ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದೂ  ಹೇಳಿದರು. 

ಈ ಬಗ್ಗೆ ಗುರುವಾರ ಪ್ರತಿಕ್ರಿಯಿಸಿದ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು, '288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ 145 ಶಾಸಕರ ಬೆಂಬಲ ಇರುವ ತೃತೀಯ ಲಿಂಗಿಗಳು ಅಥವಾ ಯಾವುದೇ ಜಾತಿಯ ವ್ಯಕ್ತಿಯು ಮುಖ್ಯಮಂತ್ರಿಯಾಗಬಹುದು' ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು