ಸೋಮವಾರ, ಏಪ್ರಿಲ್ 19, 2021
31 °C

2020ರಲ್ಲಿ ಗೃಹ ಸಚಿವಾಲಯ ಇಂಟರ್ನೆಟ್‌ ಸ್ಥಗಿತಗೊಳಿಸುವ ಆದೇಶ ಹೊರಡಿಸಿಲ್ಲ: ಧೋತ್ರೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2020ರಲ್ಲಿ ಇಂಟರ್ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಗೃಹ ಸಚಿವಾಲಯ (ಎಂಎಚ್‌ಎ) ಯಾವುದೇ ಆದೇಶ ಹೊರಡಿಸಿಲ್ಲ ಎಂದು ದೂರಸಂಪರ್ಕ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದರು.

ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು (ಸಾರ್ವಜನಿಕ ತುರ್ತು ಅಥವಾ ಸಾರ್ವಜನಿಕ ಸುರಕ್ಷತೆ) ನಿಯಮಗಳು, 2017 ರ ಅಡಿಯಲ್ಲಿ ಸರ್ಕಾರವು ಇಂಟರ್ನೆಟ್ ಸೇರಿದಂತೆ ಟೆಲಿಕಾಂ ಸೇವೆಗಳನ್ನು ಅಮಾನತುಗೊಳಿಸಬಹುದು. ಈ ಪ್ರಕರಣದ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಥವಾ ಸಂಬಂಧಪಟ್ಟ ರಾಜ್ಯ ಗೃಹ ಕಾರ್ಯದರ್ಶಿ ಹೊರಡಿಸಿದ ಆದೇಶದ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಲು ಅವಕಾಶ ಇದೆ ಎಂದು ಹೇಳಿದರು.

‘2020 ರಲ್ಲಿ ಇಂಟರ್ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಎಂಎಚ್‌ಎ ತಿಳಿಸಿದೆ’ ಎಂದು ರಾಜ್ಯಸಭಾ ಸದಸ್ಯ ಆನಂದ್‌ ಶರ್ಮಾ ಕೇಳಿದ ಪ್ರಶ್ನೆಗೆ ಸಂಜಯ್ ಧೋತ್ರೆ ಉತ್ತರಿಸಿದ್ದಾರೆ.

ಇದನ್ನೂ ಓದಿ... ಕೋವಿಡ್: ಪಂಜಾಬ್‌ನ 9 ಜಿಲ್ಲೆಗಳಲ್ಲಿ ನೈಟ್‌ ಕರ್ಫ್ಯೂ ಅವಧಿ 2 ಗಂಟೆ ವಿಸ್ತರಣೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು