ಮಂಗಳವಾರ, ಜೂನ್ 22, 2021
24 °C

ಕೇಂದ್ರ ಸಚಿವ ಶ್ರೀಪಾದ್‌ ನಾಯ್ಕ್‌ಗೆ ಕೋವಿಡ್‌–19 ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

ಕೇಂದ್ರ ಸಚಿವ ಶ್ರೀಪಾದ್ ವೈ ನಾಯ್ಕ್‌

ನವದೆಹಲಿ: ಕೇಂದ್ರ ಸಚಿವ ಶ್ರೀಪಾದ್ ವೈ ನಾಯ್ಕ್‌ ಅವರಿಗೆ ಬುಧವಾರ ಕೋವಿಡ್‌–19 ದೃಢಪಟ್ಟಿದ್ದು, ಮನೆಯಲ್ಲೇ ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ.

ಕೊರೊನಾ ವೈರಸ್‌ ಸೋಂಕು ಲಕ್ಷಣಗಳು ಕಂಡು ಬಂದಿರದ ಕಾರಣ ಮನೆಯಲ್ಲಿಯೇ ಪ್ರತ್ಯೇಕವಾಗಿ ಉಳಿಯುವುದಾಗಿ ಕೇಂದ್ರದ ಆಯುಷ್‌ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್‌ ನಾಯ್ಕ್ ಹೇಳಿದ್ದಾರೆ.

ಟ್ವಿಟರ್‌ ಮೂಲಕ ಕೋವಿಡ್‌–19 ಪಾಸಿಟಿವ್‌ ಇರುವ ವಿಚಾರ ತಿಳಿಸಿದ್ದಾರೆ.

'ಇಂದು ಕೋವಿಡ್‌–19 ಪರೀಕ್ಷೆಗೆ ಒಳಗಾದೆ ಹಾಗೂ ಸೋಂಕು ಲಕ್ಷಣಗಳು ಇರದಿದ್ದರೂ ಪಾಸಿಟಿವ್‌ ಬಂದಿದೆ. ಉಳಿದಂತೆ ಆರೋಗ್ಯ ಸ್ಥಿತಿ ಸಹಜವಾಗಿದೆ ಹಾಗೂ ಮನೆಯಲ್ಲೇ ಉಳಿಯಲು ತೀರ್ಮಾನಿಸಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೆ ಒಳಗಾಗಿ ಹಾಗೂ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಿ' ಎಂದು ಟ್ವೀಟಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು