ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯರ ಸ್ಥಳಾಂತರ: ಉಕ್ರೇನ್‌ನ ನೆರೆ ರಾಷ್ಟ್ರಗಳಿಗೆ ತೆರಳಲಿರುವ ಕೇಂದ್ರ ಸಚಿವರು

Last Updated 28 ಫೆಬ್ರುವರಿ 2022, 5:59 IST
ಅಕ್ಷರ ಗಾತ್ರ

ನವದಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗುವ ಉದ್ದೇಶದಿಂದ ಕೇಂದ್ರದ ಕೆಲವು ಸಚಿವರು ಉಕ್ರೇನ್ ನೆರೆ ರಾಷ್ಟ್ರಗಳಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಅವರು ವಿದ್ಯಾರ್ಥಿಗಳಿಗೆ ನೆರವಾಗಲು ಉಕ್ರೇನ್ ನೆರೆ ದೇಶಗಳಿಗೆ ತೆರಳಲಿದ್ದಾರೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಉಕ್ರೇನ್‌ ಬಿಕ್ಕಟ್ಟಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತಮಟ್ಟದ ಸಭೆ ಕರೆದಿದ್ದಾರೆ. ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗಲು ಕೇಂದ್ರದ ಕೆಲವು ಸಚಿವರು ಉಕ್ರೇನ್ ನೆರೆ ದೇಶಗಳಿಗೆ ತೆರಳುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಕೂಡ ವರದಿ ಮಾಡಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ನೆರೆ ದೇಶಗಳಾದ ಪೋಲೆಂಡ್, ರೊಮೇನಿಯಾ, ಹಂಗೇರಿ, ಸ್ಲೊವಾಕಿಯಾ ಮೂಲಕ ಸ್ವದೇಶಕ್ಕೆ ಕರೆಸಿಕೊಳ್ಳಲಾಗುತ್ತಿದೆ. ‘ಆಪರೇಷನ್ ಗಂಗಾ’ ಎಂಬ ಹೆಸರಿನ ಕಾರ್ಯಾಚರಣೆ ಮೂಲಕ ಉಕ್ರೇನ್‌ನಿಂದ ಭಾರತೀಯರ ಸ್ಥಳಾಂತರ ನಡೆಯುತ್ತಿದೆ. ಈ ದೇಶಗಳ ಗಡಿಗಳಲ್ಲಿ ಉಕ್ರೇನ್‌ನಿಂದ ಬರುವ ಭಾರತೀಯರಿಗೆ ನೆರವಾಗಲೆಂದೇ ಕೇಂದ್ರಗಳನ್ನು ತೆರೆಯಲಾಗಿದ್ದು, ಇವು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT