ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ನೂತನ ಸಿಎಂ ಆಯ್ಕೆ; ಕೇಂದ್ರ ವೀಕ್ಷಕರಾಗಿ ಪ್ರಲ್ಹಾದ ಜೋಶಿ, ತೋಮರ್

Last Updated 12 ಸೆಪ್ಟೆಂಬರ್ 2021, 2:50 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್‌ನ ನೂತನ ಮುಖ್ಯಮಂತ್ರಿ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇಬ್ಬರು ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿದೆಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ಅವರನ್ನು ವೀಕ್ಷಕರಾಗಿ ನೇಮಿಸಲಾಗಿದ್ದು, ಭಾನುವಾರದಂದು ಗುಜರಾತ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಆಯ್ಕೆಯಾಗಲಿದೆ. ಭಾನುವಾರದಂದೇ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ (65) ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಬಗೆಗಿನ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಗೆ 15 ತಿಂಗಳುಗಳು ಮಾತ್ರ ಬಾಕಿ ಉಳಿದಿರುವಂತೆಯೇ ರೂಪಾಣಿ ರಾಜೀನಾಮೆ ಸಲ್ಲಿಸಿದ್ದರು. ಗುಜರಾತ್‌ನಲ್ಲಿ 2022 ಡಿಸೆಂಬರ್‌ನಲ್ಲಿ ಚುನಾವಣೆ ನಿಗದಿಯಾಗಿದೆ.

ಕಳೆದ ಆರು ತಿಂಗಳಲ್ಲಿ ಬಿಜೆಪಿಯು ಅಧಿಕಾರದಿಂದ ಕೆಳಗಿಳಿಸಿ ನಾಲ್ಕನೇ ಮುಖ್ಯಮಂತ್ರಿ ವಿಜಯ್ ರೂಪಾಣಿ ಎನಿಸಿದ್ದಾರೆ. 2017ರಲ್ಲಿ ಅವರು ಸಿಎಂ ಆಗಿ ಪದಗ್ರಹಣ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT