ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಮತ್ತೆ ಕೋವಿಡ್‌

Last Updated 12 ಜನವರಿ 2022, 1:29 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (64) ಅವರಿಗೆ ಮತ್ತೆ ಕೋವಿಡ್‌–19 ದೃಢಪಟ್ಟಿದ್ದು, ಪ್ರತ್ಯೇಕ ವಾಸದಲ್ಲಿದ್ದಾರೆ.

ಕೊರೊನಾ ವೈರಸ್‌ ಸೋಂಕು ತಗುಲಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ರಾತ್ರಿ ಪ್ರಕಟಿಸಿದ್ದು, 'ನನಗೆ ಸೋಂಕಿನ ಸೌಮ್ಯ ಲಕ್ಷಣಗಳಿವೆ ಹಾಗೂ ಕೋವಿಡ್‌–19 ದೃಢಪಟ್ಟಿದೆ. ಅಗತ್ಯವಿರುವ ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದೇನೆ, ನಾನು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದೇನೆ' ಎಂದಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪ್ರತ್ಯೇಕವಾಗಿ ವಾಸಿಸುವ ಜೊತೆಗೆ ಪರೀಕ್ಷೆಗೆ ಒಳಗಾಗುವಂತೆ ತಿಳಿಸಿದ್ದಾರೆ.

ಗಡ್ಕರಿ ಅವರಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲೂ ಕೊರೊನಾ ವೈರಸ್‌ ಸೋಂಕು ತಗುಲಿತ್ತು. ಓಮೈಕ್ರಾನ್‌ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆ ದೇಶದಾದ್ಯಂತ ಹಲವು ಮುಖಂಡರಲ್ಲಿ ಕೋವಿಡ್–19 ದೃಢಪಟ್ಟಿದೆ. ಕೇಂದ್ರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸೇರಿದಂತೆ ಹಲವು ರಾಜಕೀಯ ನಾಯಕರಲ್ಲಿ ಇತ್ತೀಚೆಗೆ ಕೋವಿಡ್‌ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT