ಶುಕ್ರವಾರ, ಜನವರಿ 27, 2023
17 °C

ರಾಷ್ಟ್ರದ ಹಿತಕ್ಕಾಗಿ ಬಿಜೆಪಿ ಅಧಿಕಾರ ಬಳಸುತ್ತಿದೆ: ಸಿ.ಟಿ ರವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಬಿಎಸ್‌ಪಿ, ಕಾಂಗ್ರೆಸ್‌ ಸೇರಿದಂತೆ ಇತರೆ ವಿರೋಧ ಪಕ್ಷಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಅಧಿಕಾರವನ್ನು ಬಳಸಿದರೆ, ಬಿಜೆಪಿಯು ರಾಷ್ಟ್ರದ ಒಳಿತಿಗೆ ಅಧಿಕಾರವನ್ನು ಉಪಯೋಗಿಸುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕದ ಸಂಭಾವ್ಯ ಮೂರನೇ ಅಲೆಯಿಂದ ಜನರನ್ನು ರಕ್ಷಿಸಲು ಸ್ವಯಂಸೇವಕರಿಗೆ ತರಬೇತಿ ಕಾರ್ಯಕ್ರಮವನ್ನು ಬಿಜೆಪಿ ಆಯೋಜಿಸಿತ್ತು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,‘ವಿರೋಧ ಪಕ್ಷಗಳು ಕುಟುಂಬ, ಜಾತಿ, ಭ್ರಷ್ಟಚಾರವನ್ನು ಉತ್ತೇಜಿಸಲು ಮತ್ತು ತಮ್ಮ ಹಾಗೂ ತಮ್ಮ ಆತ್ಮೀಯರ ಹಿತಾಸಕ್ತಿಗಾಗಿ ಮಾತ್ರ ಅಧಿಕಾರವನ್ನು ಬಳಸುತ್ತಿದೆ. ಇನ್ನೊಂದೆಡೆ, ಬಿಜೆಪಿಯು ಸಮಾಜ ಮತ್ತು ದೇಶದ ಹಿತಾಸಕ್ತಿಗಾಗಿ ಅಧಿಕಾರವನ್ನು ಸದುಪಯೋಗ ಮಾಡುತ್ತಿದೆ’ ಎಂದು ಸಿ.ಟಿ ರವಿ ದೂರಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸರ್ಕಾರವು ಜನರ ಜೀವನ ಮತ್ತು ಜೀವನೋಪಾಯವನ್ನು ಉಳಿಸಲು ಪ್ರಯತ್ನಿಸುತ್ತಿದೆ. ಅಲ್ಲದೆ ಪಕ್ಷದ ಕಾರ್ಯಕರ್ತರು ಕೂಡ ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ. ಆದರೆ ವಿರೋಧ ಪಕ್ಷಗಳು ಬಡವರಿಗೆ ಸಹಾಯ ಮಾಡುವ ಬದಲು ಸುಳ್ಳನ್ನು ಹರಡುತ್ತಿದೆ. ಜನರಲ್ಲಿ ಗೊಂದಲವನ್ನು ಸೃಷ್ಟಿಸುತ್ತಿದೆ’ ಎಂದು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು