ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಮೂರನೇ ಹಂತದ ಅನ್‌ಲಾಕ್‌ ಪ್ರಕ್ರಿಯೆಗೆ ಸಿದ್ಧತೆ

Last Updated 6 ಜೂನ್ 2021, 6:43 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ವಿಧಿಸಿರುವ ನಿರ್ಬಂಧಗಳನ್ನು ಹಂತ ಹಂತವಾಗಿ ತೆರೆವುಗೊಳಿಸಲಾಗುತ್ತಿದ್ದು,ಮುಂಬೈನಲ್ಲಿ ಸೋಮವಾರದಿಂದ ಮೂರನೇ ಹಂತದ ಅನ್‌ಲಾಕ್‌ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಈ ಅನ್‌ಲಾಕ್‌ ಪ್ರಕ್ರಿಯೆಯ ಭಾಗವಾಗಿ ರೆಸ್ಟೋರೆಂಟ್‌, ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ತೆರೆಯಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಆದರೆ ಮಾಲ್‌ಗಳು, ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್‌ಗಳು ಮುಚ್ಚಿರಲಿವೆ.

ಬೃಹನ್‌ ಮುಂಬೈ ಮಹಾನಗರ ಪಾಲಿಕೆಯ(ಬಿಎಂಸಿ) ಹೊಸ ಮಾರ್ಗಸೂಚಿ ಪ್ರಕಾರ ಕೇವಲ ವೈದ್ಯಕೀಯ ಮತ್ತು ಅಗತ್ಯಸೇವೆಗಳ ಸಿಬ್ಬಂದಿಗೆ ಮಾತ್ರ ಸ್ಥಳೀಯ ರೈಲಿನಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

‘ಜೂನ್‌ 7ರಿಂದ ಮುಂಬೈನಲ್ಲಿ ಅಗತ್ಯ ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ವಾರದ ಎಲ್ಲಾ ದಿನಗಳೂ ಸಂಜೆ 4 ರವರೆಗೆ ತೆರೆದಿರಬಹುದಾಗಿದೆ. ಇನ್ನುಳಿದ ಅಂಗಡಿಗಳು ವಾರದ ದಿನಗಳಲ್ಲಿ ಮಾತ್ರ ಸಂಜೆ 4 ಗಂಟೆವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ಮಾಲ್‌ಗಳು, ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ಗಳ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರಿಸಲಾಗುವುದು’ ಎಂದು ಬಿಎಂಸಿ ಆದೇಶದಲ್ಲಿ ಹೇಳಿದೆ.

‘ಮುಂಬೈನ ರೆಸ್ಟೋರೆಂಟ್‌ಗಳು ವಾರದ ದಿನಗಳಲ್ಲಿ ಶೇಕಡ 50 ರಷ್ಟು ಸಾಮರ್ಥ್ಯದೊಂದಿಗೆ ಸಂಜೆ 4ಗಂಟೆಯವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ಸಾರ್ವಜನಿಕ ಸ್ಥಳಗಳು ಮತ್ತು ಮೈದಾನಗಳು ಪ್ರತಿನಿತ್ಯ ಬೆಳಿಗ್ಗೆ 5ರಿಂದ 9 ರವರೆಗೆ ತೆರೆದಿರಲಿದೆ. ಖಾಸಗಿ ಕಚೇರಿಗಳು ಕೂಡ ಶೇಕಡ 50ರಷ್ಟು ಸಾಮರ್ಥ್ಯದೊಂದಿಗೆ ಸಂಜೆ 4 ಗಂಟೆವರೆಗೆ ಕಾರ್ಯ ನಿರ್ವಹಿಸಬಹುದು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT