ಬುಧವಾರ, ಡಿಸೆಂಬರ್ 2, 2020
16 °C

ಉನ್ನಾವ್‌ ಪ್ರಕರಣ: ಶಿಕ್ಷೆ ಪ್ರಶ್ನಿಸಿದ ಅರ್ಜಿಗೆ ಪ್ರತಿಕ್ರಿಯಿಸಲು ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉನ್ನಾವ್‌ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆ ಸಾವಿನ ಪ್ರಕರಣದಲ್ಲಿ ಹತ್ತು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಅನರ್ಹ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ಅದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್‌ ಸಿಬಿಐಗೆ ಶುಕ್ರವಾರ ನೋಟಿಸ್‌ ನೀಡಿದೆ.

ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ ಆದೇಶ ಮತ್ತು ಶಿಕ್ಷೆಯನ್ನು ಅಮಾನತಿನಲ್ಲಿಡುವಂತೆ ಸೆಂಗರ್‌ ಮನವಿ ಮಾಡಿದ್ದು, ಈ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ನ್ಯಾಯಮೂರ್ತಿ ವಿಭು ಬಖ್ರು ಅವರು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಈ ಕುರಿತ ಮುಂದಿನ ವಿಚಾರಣೆ ಇದೇ 10ಕ್ಕೆ ನಿಗದಿಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು