ಶನಿವಾರ, ಡಿಸೆಂಬರ್ 4, 2021
20 °C

ಉನ್ನಾವ್‌ ಅತ್ಯಾಚಾರ ಪ್ರಕರಣ: ತನಿಖೆ ನಡೆಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉನ್ನಾವ್‌ ಅತ್ಯಾಚಾರ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸದೆ ಲೋಪ ಎಸಗಿರುವ ನಾಲ್ವರು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಬಿಐ ಶಿಫಾರಸು ಮಾಡಿದೆ

ಈ ಸಂಬಂಧ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಬಿಐ ಆಗಸ್ಟ್‌ನಲ್ಲಿ ಪತ್ರ ಬರೆದಿದೆ. ಈ ಪತ್ರದಲ್ಲಿ ಉನ್ನಾವ್‌ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಐಎಎಸ್‌ ಅಧಿಕಾರಿ ಅದಿತಿ ಸಿಂಗ್‌, ಐಪಿಎಸ್‌ ಅಧಿಕಾರಿ ಪುಷ್ಪಾಂಜಲಿ ದೇವಿ, ನೇಹಾ ಪಾಂಡೆ,   ಅಷ್ಟಭುಜ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ. 

ಉನ್ನಾವ್‌ ಅತ್ಯಾಚಾರ ಪ್ರಕರಣದಲ್ಲಿ ಸರಿಯಾದ ರೀತಿಯನ್ನು ತನಿಖೆ ನಡೆಸದ ಕಾರಣ ಈ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ. 

2017ರಲ್ಲಿ ಉತ್ತರಪ್ರದೇಶದ ಉನ್ನಾವ್‌ನ ಮಖಿ ಗ್ರಾಮದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಕುಲ್‌ದೀಪ್‌ ಸಿಂಗ್‌ ಸೆಂಗರ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು