ಬುಧವಾರ, ಜನವರಿ 19, 2022
24 °C

ಕಂಪನಿಯ ಜಾಹೀರಾತು ಫಲಕದಲ್ಲಿ ಮೋಹನ್‌ ಭಾಗವತ್ ಚಿತ್ರ ಬಳಕೆ: ದೂರು ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ಮುಜಾಫರ್‌ನಗರ (ಉತ್ತರಪ್ರದೇಶ): ಜಾಹೀರಾತು ಫಲಕದಲ್ಲಿ ಆರ್‌ಎಸ್ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಜಾಹೀರಾತು ಕಂಪನಿಯ ಮಾಲೀಕ ಸತ್ಯ ಪ್ರಕಾಶ್‌ ರೇಶು ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸುರೇಂದರ್‌ ಸಿಂಗ್‌ ಅವರು ಪೊಲೀಸರಿಗೆ ದೂರು ನೀಡಿದ್ದರು. ಐಪಿಸಿಯ ಸೆಕ್ಷನ್‌ 505 (1) ಅಡಿ ಪ್ರಕರಣ ದಾಖಲಾಗಿದೆ.

ಜಾಹೀರಾತು ಫಲಕಗಳಿಂದ ಮೋಹನ್‌ ಭಾಗವತ್‌ ಅವರ ಚಿತ್ರಗಳನ್ನು ತೆಗೆಯುವಂತೆ ಹೇಳಿದ್ದರೂ ತೆಗೆಯಲಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು