ಮಂಗಳವಾರ, ಜೂನ್ 28, 2022
23 °C

ಉತ್ತರ ಪ್ರದೇಶ ಬಜೆಟ್ ಅಧಿವೇಶನ: ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಗೈರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶದ ಬಜೆಟ್ ಅಧಿವೇಶನದ ಮೊದಲ ದಿನ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರು ಭಾಗವಹಿಸಲಿಲ್ಲ. ಅಲ್ಲದೆ, ಸೋಮವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣ ಮಾಡುವ ವೇಳೆಯೇ ಸಮಾಜವಾದಿ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. 

 ಸದನ ಆರಂಭವಾಗುತ್ತಿದ್ದಂತೆ ಕಾನೂನು ಸುವ್ಯವಸ್ಥೆ, ರೈತರು ಹಾಗೂ ಅತ್ಯಾಚಾರ ಘಟನೆಗೆ ಸಂಬಂಧಿಸಿದ ಫಲಕಗಳನ್ನು ಹಿಡಿದು, ಸದನದ ಬಾವಿಗೆ ಧುಮುಕಿದ ಎಸ್‌ಪಿ ಸದಸ್ಯರು, ‘ರಾಜ್ಯಪಾಲರೇ ವಾಪಸ್ ಹೋಗಿ’ ಎಂಬ ಘೋಷಣೆಗಳನ್ನು ಕೂಗಿದರು. ಆದಾಗ್ಯೂ, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು, 15 ನಿಮಿಷಗಳ ಕಾಲ ತಮ್ಮ ಭಾಷಣವನ್ನು ಓದಿ ಮುಗಿಸಿದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು