ಬುಧವಾರ, ಮಾರ್ಚ್ 22, 2023
31 °C

ಅಂಬೇಡ್ಕರ್ ಪ್ರತಿಮೆ ವಿರೂಪ: ಪ್ರತಿಭಟನಕಾರರ ಮೇಲೆ ಪೊಲೀಸ್ ಲಾಠಿ ಪ್ರಹಾರ

ಪಿಟಿಐ Updated:

ಅಕ್ಷರ ಗಾತ್ರ : | |

ಅಯೋಧ್ಯ, ಉತ್ತರ ಪ್ರದೇಶ: ಅಂಬೇಡ್ಕರ್ ನಗರ ಜಿಲ್ಲೆಯ ಬಿ.ಆರ್. ಅಂಬೇಡ್ಕರ್‌ ಪ್ರತಿಮೆ ವಿರೂಪಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಭೀಮ್ ಆರ್ಮಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಇಲ್ಲಿನ ಜಲಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜಿದ್‌ಪುರದಲ್ಲಿ ಭಾನುವಾರ ಕೆಲ ಕಿಡಿಗೇಡಿಗಳು ಪ್ರತಿಮೆ ಮುಖಕ್ಕೆ ಕಪ್ಪು ಬಣ್ಣ ಬಳಿದ ಕಾರಣ ಘರ್ಷಣೆ ನಡೆದಿದೆ. 

ಕೆಲವೇ ನಿಮಿಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ಆರಂಭಿಸಿದರು ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ‌

ಗುಂಪು ಚದುರಿಸುವ ವೇಳೆ ಪ್ರತಿಭಟನಕಾರರು ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದರು ಎಂದು  ಪೊಲೀಸ್ ವರಿಷ್ಠಾಧಿಕಾರಿ (ಅಂಬೇಡ್ಕರ್ ನಗರ) ಅಜಿತ್ ಕುಮಾರ್ ಸಿನ್ಹಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು