ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಬೆಂಬಲ: ಉತ್ತರ ಪ್ರದೇಶದ ಬಿಜೆಪಿ ನಾಯಕಿ ರಾಜೀನಾಮೆ

Last Updated 7 ಏಪ್ರಿಲ್ 2021, 10:38 IST
ಅಕ್ಷರ ಗಾತ್ರ

ಮುಜಾಫರ್‌ನಗರ(ಉತ್ತರ ಪ್ರದೇಶ): ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸುವುದಕ್ಕಾಗಿ ಇಲ್ಲಿನ ಬಿಜೆಪಿ ನಾಯಕಿ ಪ್ರಿಯಂವದಾ ತೋಮರ್ ಅವರು ತಮ್ಮ ಸ್ಥಾನಕ್ಕೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆಗಳು ನಡೆಯುವ ಸಂದರ್ಭದಲ್ಲಿ, ಪ್ರಿಯಂವದಾ ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ‘ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿವೆ. ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಇಂಥ ರೈತ ವಿರೋಧಿ ನೀತಿಗಳನ್ನು ಹೊಂದಿರುವ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದೇನೆ‘ ಎಂದು ಪ್ರಿಯಂವದಾ ಬರೆದಿದ್ದಾರೆ.

‘ಬಿಜೆಪಿ ಉತ್ತರಪ್ರದೇಶದ ಮಹಿಳೆಯರನ್ನು ನಿರ್ಲಕ್ಷಿಸಿದೆ ಮತ್ತು ಅವರ ಆಶಯಗಳನ್ನು ಪೂರೈಸುವಲ್ಲಿ ವಿಫಲವಾಗಿದೆ‘ ಎಂದು ಪ್ರಿಯಂವದಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT