ಬಿಜೆಪಿ ನಾಯಕನ ಹತ್ಯೆ: ಪ್ರಮುಖ ಆರೋಪಿ ಬಂಧನ

ಲಖನೌ: ಫಿರೋಜಾಬಾದ್‌ನ ಸ್ಥಳೀಯ ಬಿಜೆಪಿ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತ ನಾಯಕನನ್ನು ಡಿ.ಕೆ ಗುಪ್ತ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ್ ಡಿ.ಕೆ ಗುಪ್ತ ತಮ್ಮ ಅಂಗಡಿಯನ್ನು ಮುಚ್ಚಿ ಮನೆಗೆ ಮರಳುತ್ತಿರುವಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಎರಡು ದಿನಗಳಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.