ಬುಧವಾರ, ಜನವರಿ 20, 2021
16 °C

ಮದುವೆ ಉದ್ದೇಶದ ಮತಾಂತರದ ತಡೆಗೆ ಸುಗ್ರೀವಾಜ್ಞೆ: ಉತ್ತರ ಪ್ರದೇಶದ ಸಂಪುಟ ತೀರ್ಮಾನ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ವಿವಾಹದ ಸಲುವಾಗಿ ನಡೆಯುವ ಧಾರ್ಮಿಕ ಮತಾಂತರವನ್ನು ತಡೆಯುವ ಕಾನೂನನ್ನು ಬಿಗಿಗೊಳಿಸುವ ಕರಡನ್ನು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಅಂಗೀಕರಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾನೂನುಬಾಹಿರ ಧಾರ್ಮಿಕ ಮತಾಂತರಗಳ ವಿರುದ್ಧ ಸುಗ್ರೀವಾಜ್ಞೆ ತರಲು ಉತ್ತರ ಪ್ರದೇಶ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಉತ್ತರ ಪ್ರದೇಶ ಸಚಿವ ಸಿದ್ಧಾರ್ಥನಾಥ ಸಿಂಗ್‌ ತಿಳಿಸಿದ್ದಾರೆ.

ಮದುವೆ ಉದ್ದೇಶದ ಮತಾಂತರಕ್ಕೆ ಬಿಜೆಪಿ 'ಲವ್ ಜಿಹಾದ್' ಎಂಬ ಹೆಸರಿಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು