ಮಂಗಳವಾರ, ಸೆಪ್ಟೆಂಬರ್ 28, 2021
26 °C

ಸಿಎಂ ಯೋಗಿಗೆ ಶಹಬ್ಬಾಸ್‌ಗಿರಿ ಕೊಟ್ಟ ಗೃಹ ಸಚಿವ ಅಮಿತ್ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ಲಕ್ನೋ; 'ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಭಾನುವಾರ ಇಲ್ಲಿ ಉತ್ತರ ಪ್ರದೇಶ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ಕಟ್ಟಡಕ್ಕೆ ಶೀಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ ಯೋಗಿ ಆದಿತ್ಯಾನಾಥ ಅವರು ಸಹ ಜೊತೆಗಿದ್ದರು.

‘ಭಾರತೀಯ ಜನತಾ ಪಕ್ಷ ಎಂದಿಗೂ ಜಾತಿ ಆಧಾರಿತವಾಗಿ ಕೆಲಸ ಮಾಡುವುದಿಲ್ಲ. ಬಡವರ ಏಳ್ಗೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ’ ಎಂದು ಹೇಳಿದ್ದಾರೆ.

‘ಕಳೆದ ಆರು ವರ್ಷದಲ್ಲಿ ಉತ್ತರ ಪ್ರದೇಶ ಗಣನೀಯವಾಗಿ ಅಭಿವೃದ್ಧಿ ಹೊಂದಿದ್ದು, ಇದಕ್ಕೆ ಯೋಗಿ ಅವರ ಆಡಳಿತ ಹಾಗೂ ಅವರ ನಾಯಕತ್ವವೇ ಕಾರಣ’ ಎಂದು ಹೊಗಳಿದ್ದಾರೆ.

ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:  ಪೆಗಾಸಸ್‌: ಸುಪ್ರೀಂ ಕೋರ್ಟ್‌ನಲ್ಲಿ ಆಗಸ್ಟ್ 5ರಂದು ವಿಚಾರಣೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು