ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಆರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Last Updated 28 ಡಿಸೆಂಬರ್ 2020, 7:49 IST
ಅಕ್ಷರ ಗಾತ್ರ

ಅಯೋಧ್ಯೆ: ದೇಶ ವಿರೋಧಿ ಘೋಷಣೆಗಳನ್ನು ಹಾಕಿದ ಆರೋಪದ ಮೇರೆಗೆ ಇಲ್ಲಿನ ಕಾಲೇಜೊಂದರ ಆರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ದೂರು ನೀಡಿದ್ದರು.

ವಿದ್ಯಾರ್ಥಿ ಸಂಘಟನೆಯ ಚುನಾವಣೆ ನಡೆಸುವಂತೆ ಆಗ್ರಹಿಸಿ ಸಾಕೇತ್‌ ಪದವಿ ಕಾಲೇಜಿನ ವಿದ್ಯಾರ್ಥಿಗಳು ಡಿಸೆಂಬರ್‌ 16 ರಂದು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು.

‘ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ‘ಆಜಾದಿ ಲೇಕೆ ರಹೇಂಗೆ’ ( ಸ್ವಾತಂತ್ರ್ಯ ಪಡೆದೆ ತೀರುತ್ತೇವೆ) ಎನ್ನುವ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ’ ಎಂದು ಸಾಕೇತ್‌ ಪದವಿ ಕಾಲೇಜಿನ ಪ್ರಾಂಶುಪಾಲ ಎನ್‌.ಡಿ ಪಾಂಡೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳು ಸ್ವಾತಂತ್ರ್ಯದ ಘೋಷಣೆಗಳನ್ನು ಹಾಕಿದ್ದರು. ಹಿಂಸಾಚಾರದ ಮೂಲಕ ಸ್ವಾತಂತ್ರ್ಯ ಪಡೆಯುವುದಾಗಿ ಹೇಳಿದ್ದರು. ಮಾತೃ ಭೂಮಿ ರಕ್ಷಿಸುವುದು ನನ್ನ ಧರ್ಮ. ಹಾಗಾಗಿ ನಾನು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ್ದೇನೆ’ ಎಂದು ಎನ್‌.ಡಿ ಪಾಂಡೆ ತಿಳಿಸಿದ್ದಾರೆ.

ಆದರೆ, ಈ ಆರೋಪವನ್ನು ತಳ್ಳಿ ಹಾಕಿರುವ ವಿದ್ಯಾರ್ಥಿಗಳು, ‘ನಾವು ಭ್ರಷ್ಟ ಪ್ರಾಂಶುಪಾಲ ಮತ್ತು ವಿದ್ಯಾರ್ಥಿ ವಿರೋಧಿ ವ್ಯವಸ್ಥೆಯಿಂದ ಸ್ವಾತಂತ್ರ್ಯ ಬಯಸಿದ್ದೇವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT