ಶನಿವಾರ, ಆಗಸ್ಟ್ 13, 2022
22 °C

ಯುವಕರ ಸೆಳೆಯಲು ಕಾಂಗ್ರೆಸ್‌ ತಂತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ ಕುರಿತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸುವ ಮೂಲಕ ಉತ್ತರ ಪ್ರದೇಶದ ಕಾಂಗ್ರೆಸ್‌ ಘಟಕವು ಯುವ ಮತದಾರರನ್ನು ಸೆಳೆಯಲು ನಿರ್ಧರಿಸಿದೆ.

ರಾಜೀವ್‌ ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನು ಸೆಪ್ಟೆಂಬರ್ 13 ಮತ್ತು 14 ರಂದು ಆನ್‌ಲೈನ್ ಮೂಲಕ ನಡೆಸಲಾಗುವುದು. ಈ ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ರಾಜೀವ್‌ ಗಾಂಧಿ ಅವರ ಕುರಿತು ಸಮಗ್ರ ಮಾಹಿತಿ ದೊರಕಲಿದೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ಅವರು ಹೇಳಿದ್ದಾರೆ.

16 ರಿಂದ 22 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಈವರೆಗೆ 5 ಲಕ್ಷ ಮಂದಿ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. 20 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು