ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಜುಬೈರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಅಕ್ಷರ ಗಾತ್ರ

ಲಖನೌ: ‘ಫ್ಯಾಕ್ಟ್‌ ಚೆಕ್‌’ ವೆಬ್‌ಸೈಟ್‌ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಉತ್ತರ ಪ್ರದೇಶದ ಸೆಷೆನ್ಸ್ ನ್ಯಾಯಾಲಯವೊಂದು ಸೋಮವಾರ ಆದೇಶಿಸಿದೆ.

ಸೀತಾಪುರ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಜುಬೈರ್ ಅವರನ್ನು ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸಲಾಯಿತು. ಅವರ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ಗೆ ಸೆಕ್ಷನ್ 153ಬಿ, 505(1) (ಬಿ), 505(2) ಸೇರ್ಪಡೆಗೊಳಿಸಲಾಗಿದೆ.

ದ್ವೇಷ ಹರಡಿದ ಆರೋಪದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಂದು (ಜುಲೈ 11) ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಜುಬೈರ್‌ಗೆ ಸಮನ್ಸ್ ನೀಡಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೀತಾಪುರದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಜುಬೈರ್‌ಗೆ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅದರ ಬೆನ್ನಲ್ಲೇ ಲಖಿಂಪುರ ಖೇರಿ ಪೊಲೀಸರು ಜುಬೈರ್‌ಗೆ ವಾರೆಂಟ್ ಜಾರಿ ಮಾಡಿದ್ದರು.

ಸೀತಾಪುರದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿದ್ದರೂ ದೆಹಲಿಯಲ್ಲಿ ಮತ್ತೊಂದು ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಕಾರಣ ಜುಬೈರ್ ಪೊಲೀಸರ ವಶದಲ್ಲೇ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT