ಮಂಗಳವಾರ, ಏಪ್ರಿಲ್ 20, 2021
32 °C

ಕೋವಿಡ್-19ನಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಯ ನಿಖರ ಮಾಹಿತಿ ಇಲ್ಲ: ಉ.ಪ್ರ ಡಿಜಿಪಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಲಖನೌ: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಮೃತಪಟ್ಟ ಪೊಲೀಸ್‌ ಸಿಬ್ಬಂದಿಯ ನಿಖರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಉತ್ತರ ಪ್ರದೇಶ ಪೊಲೀಸ್‌ ಮಹಾನಿರ್ದೇಶಕ ಹಿತೇಶ್‌ ಚಂದ್ರ ಅವಸ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಅವರು ಎಲ್ಲ ಜಿಲ್ಲೆಗಳ ಪೊಲೀಸ್‌ ಅಧೀಕ್ಷಕರು ಮತ್ತು ಆಯುಕ್ತರಿಗೆ ಪತ್ರ ಬರೆದಿದ್ದು, ʼಈ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿಗಳು ವೈಯಕ್ತಿಕವಾಗಿ ಗಮನಹರಿಸಿಲ್ಲ ಎಂಬುದನ್ನು ಇದು ತೋರುತ್ತದೆ. ಇದರಿಂದಾಗಿ ಮೃತ ಪೊಲೀಸರ ಕುಟುಂಬಕ್ಕೆ ಪರಿಹಾರದ ಹಣ ಸಿಗುತ್ತಿಲ್ಲʼ ಎಂದು ತಿಳಿಸಿದ್ದಾರೆ.

ʼಮಾಹಿತಿಯಲ್ಲಿ ಏನಾದರೂ ವ್ಯತ್ಯಾಸಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು