ಉತ್ತರ ಪ್ರದೇಶ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು: ಬಿಜೆಪಿ

ಲಖನೌ: ಉತ್ತರ ಪ್ರದೇಶದಲ್ಲಿ 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 67 ಕಡೆ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ ಉತ್ತರ ಪ್ರದೇಶ ಘಟಕ ಪ್ರತಿಪಾದಿಸಿದೆ.
ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್‌ಸಿಂಗ್, ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಪ್ರಧಾನಿ, ಮುಖ್ಯಮಂತ್ರಿಯವರ ಜನಪ್ರಿಯತೆ ಕಾರಣದಿಂದ ಈ ಗೆಲುವು ಲಭಿಸಿದೆ ಎಂದು ತಿಳಿಸಿದರು.
ಕಳೆದ ಮಂಗಳವಾರ 22 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು. ಈ ಪೈಕಿ 21 ಕಡೆ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.