ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯ ಡಾ.ಕಫೀಲ್‌ ಖಾನ್‌ ಮಧ್ಯರಾತ್ರಿ ಜೈಲಿನಿಂದ ಬಿಡುಗಡೆ

Last Updated 2 ಸೆಪ್ಟೆಂಬರ್ 2020, 3:37 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್‌:ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಪ್ರಕರಣ ದಾಖಲಾಗಿ ಬಂಧನಕ್ಕೆ ಒಳಗಾಗಿದ್ದ ಡಾ.ಕಫೀಲ್‌ ಖಾನ್‌ ಅವರನ್ನು ಮಧ್ಯರಾತ್ರಿ ಬಿಡುಗಡೆ ಮಾಡಲಾಗಿದೆ.

ಅಲಹಾಬಾದ್‌ ಹೈಕೋರ್ಟ್‌ ಮಂಗಳವಾರ ಷರತ್ತು ಬದ್ಧ ಜಾಮೀನು ನೀಡಿದೆ. ಬಿಡುಗಡೆಗೆ ಸಂಬಂಧಿಸಿದಂತೆ 15 ದಿನಗಳಲ್ಲಿ ಹೈಕೋರ್ಟ್‌ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ತೀರ್ಪಿನ ನಂತರ, ಜೈಲು ಅಧಿಕಾರಿಗಳು ಹಲವು ಗಂಟೆಗಳು ಕಳೆದರೂ ಬಿಡುಗಡೆ ಗೊಳಿಸದಿದ್ದಾಗ ಅವರ ಕುಟುಂಬ ಅಲಹಾಬಾದ್ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಮಾಧ್ಯಮಗಳ ಎದುರು ಹೇಳಿತ್ತು. ನಂತರ ಜೈಲು ಅಧಿಕಾರಿಗಳು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಿಡುಗಡೆ ಮಾಡಿದ್ದಾರೆ

'ನನ್ನ ಮಗ ಜೈಲಿನಿಂದ ಹೊರ ಬರುತ್ತಿರುವುದು ನನಗೆ ತುಂಬಾ ಖುಷಿ ತಂದಿದೆ, ನನ್ನ ಮಗ ಒಳ್ಳೆಯ ವ್ಯಕ್ತಿ, ಅವನು ಎಂದಿಗೂ ದೇಶ ಅಥವಾ ಸಮಾಜದ ವಿರುದ್ಧ ಇಲ್ಲ ಎಂದು ಕಫಿಲ್‌ ಖಾನ್‌ ತಾಯಿ ಹೇಳಿದ್ದಾರೆ.

ಅಲಿಗಢ ಮುಸ್ಲಿಂ ಯೂನಿವರ್ಸಿಟಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆಸಲಾದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರೆಂಬ ಆರೋಪದ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.
ಜನವರಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮುಂಬೈನಲ್ಲಿ ಖಾನ್‌ ಅವರನ್ನು ಬಂಧಿಸಿತ್ತು.

2019ರ ಡಿಸೆಂಬರ್‌ 12ರಂದು ಸಿಎಎ ವಿರುದ್ಧ ನಡೆದಿದ್ದ ಪ್ರತಿಭಟನೆ ವೇಳೆ ಕಫೀಲ್‌ ಖಾನ್‌ ಭಾಷಣ ಮಾಡಿದ್ದರು. 2020ರ ಫೆಬ್ರುವರಿ 14ರಂದು ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT